ಬೆಂಗಳೂರು,ಅ,16: ಸರ್ಕಾರಿ ಸ್ಥಳಗಳು, ಶಾಲೆಗಳು, ಮೈದಾನಗಳಲ್ಲಿ ಖಾಸಗಿ ಸಂಘ ಸಂಸ್ಥೆಗಳ ಕಾರ್ಯಚಟುವಟಿಕೆಗಳಿಗೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.ಯಾವುದೇ ಖಾಸಗಿ ಸಂಘ-ಸAಸ್ಥೆಗಳ ಚಟುವಟಿಕೆಗಳಿಗೆ ಸರ್ಕಾರದ ಪೂರ್ವಾನುಮತಿ ಕಡ್ಡಾಯಗೊಳಿಸಲಾಗಿದೆ ಎಂದು ಆದೇಶ ಹೊರಡಿಸಿ, ಆರೆಸೆಸ್ಸ್ ಹೆಸರು ಉಲ್ಲೇಖಿಸದೇ ಟಾಂಗ್ ನೀಡಿದೆ.
ಯಾವುದೇ ಸಂಘ ಸಂಸ್ಥೆಗಳ ನಡೆಸುವ ಕಾರ್ಯಕ್ರಮಗಳಿಗೆ ಪೂರ್ವಾನುಮತಿ ಕಡ್ಡಾಯಗೊಳಿಸಲಾಗಿದೆ. ಸಾರ್ವಜನಿಕ ಆಸ್ತಿ, ಸಾಂಸ್ಥಿಕ ಆಸ್ತಿ ಸರಿಯಾಗಿ ನಿರ್ವಹಣೆ ಮಾಡಬೇಕು. ಯಾವುದೇ ರೀತಿ ಟ್ರಸ್ ಪಾಸ್ ಆಗೋಕೆ ಬಿಡುವಂತಿಲ್ಲ. ಅನುಮತಿ ಪಡೆದು ಕಾರ್ಯಕ್ರಮ ಮಾಡಲು ಅವಕಾಶ. ಕಾನೂನು ಉಲ್ಲಂಘಿಸಿ ಕಾರ್ಯಕ್ರಮ ಮಾಡಿದರೆ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ.