ಬೆಂಗಳೂರು:ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಶನ್ ಗೆ ಅನುಮತಿ ನೀಡಿದ ರಾಜ್ಯಪಾಲರ ವಿರುದ್ಧ ಸಚಿವ ಜಮೀರ್ ಖಾನ್ ಕೆಂಡಕಾರಿದ್ದಾರೆ.
ಈ ನಿರ್ಧಾರದಿಂದ ರಾಜ್ಯದಲ್ಲಿ ದಾಂದಲೆ, ಹಲ್ಲೆ ಮುಂತಾದ ಕೃತ್ಯಗಳು ನಡೆದರೆ ರಾಜ್ಯಪಾಲರೇ ನೇರ ಹೊಣೆಯಾಗಬೇಕಾಗುತ್ತದೆ ಎಂದು ಸಚಿವ ಜಮೀರ್ ಅಹಮದ್ ಖಾನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಇಂದು ಕಾಂಗ್ರೆಸ್ ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಮಾತನಾಡಿದ ಸಚಿವ ಜಮೀರ್ ಅಹಮದ್ ಖಾನ್, ರಾಜ್ಯದಲ್ಲಿ ದಾಂದಲೆ, ಹಲ್ಲೆಗಳಾದ್ರೆ ರಾಜ್ಯಪಾಲರೇ ನೇರ ಹೊಣೆ, ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರವಿಲ್ಲ. ಸಿಎಂ ಸ್ಥಾನದಿಂದ ಕೆಳಗಿಳಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ. ಹಿಂದುಳಿದ ನಾಯಕ ಸಿದ್ದರಾಮಯ್ಯರನ್ನು ಕೆಳಗಿಳಿಸಲು ಬಿಜೆಪಿಯಿಂದ ಷಡ್ಯಂತ್ರ ನಡೆಯುತ್ತಿದೆ. ಸಿಎಂ ವಿರುದ್ಧ ಸಂವಿಧಾನದ ವಿರುದ್ಧವಾಗಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಲಾಗಿದೆ. ರಾಜ್ಯಪಾಲರ ಕಚೇರಿ ಬಿಜೆಪಿ ಕಚೇರಿ ಮಾಡಿಕೊಂಡಿದ್ದಾರೆ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.
ಕಾನೂನು ಹೋರಾಟ ನಡೆಸುವುದನ್ನು ಬಿಟ್ಟು
ರಾಜ್ಯ ಸರ್ಕಾರವೇ ಬೀದಿಗಿಳಿದಿರುವ ಬಗ್ಗೆ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ
`