Share this news

 

 

ಬೆಂಗಳೂರು, .28: ಸರ್ಕಾರಿ ವೈದ್ಯರು ಕರ್ತವ್ಯದ ವೇಳೆ ಖಾಸಗಿ ಆಸ್ಪತ್ರೆಗಳಲ್ಲಿ ಒಳರೋಗಿಗಳಿಗೆ ಸೇವೆ ಸಲ್ಲಿಸುವಂತಿಲ್ಲ ಎಂದು ಸರ್ಕಾರ ಆದೇಶಿಸಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಒಳರೋಗಿಗಳಿಗೆ ಚಿಕಿತ್ಸೆ ನೀಡುವುದು ಸರ್ಕಾರಿ ಕರ್ತವ್ಯಗಳ ನಿರ್ವಹಣೆಗೆ ಅಡ್ಡಿಯಾಗುತ್ತದೆ ಎಂಬ ಕಾರಣದಿಂದ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಒಂದು ವೇಳೆ ನಿಯಮ ಉಲ್ಲಂಘಿಸಿದರೆ ಶಿಸ್ತು ಕ್ರಮದ ಎಚ್ಚರಿಕೆ ಕೂಡ ನೀಡಲಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ವೈದ್ಯರು ಖಾಸಗಿ ವೈದ್ಯಕೀಯ ಅಭ್ಯಾಸ ನಡೆಸುವ ಕುರಿತು ಸರ್ಕಾರ ಸುತ್ತೋಲೆ ಹೊರಡಿಸುವ ಮೂಲಕ ಸ್ಪಷ್ಟೀಕರಣ ನೀಡಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಒಳರೋಗಿಗಳಿಗೆ ನಿರಂತರ ಚಿಕಿತ್ಸೆ ಒದಗಿಸುವ ಅಗತ್ಯವಿರುವುದರಿಂದ ಹಾಗೂ ರೋಗಿಗಳ ಆರೈಕೆಯಲ್ಲಿ ನಿರ್ಲಕ್ಷ್ಯ ಕಂಡುಬಂದಿರುವ ಹಿನ್ನಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಖಾಸಗಿ ಆಸ್ಪತ್ರೆಗಳಲ್ಲಿ ಒಳರೋಗಿಗಳಿಗೆ ಚಿಕಿತ್ಸೆ ನೀಡುವುದು ಸರ್ಕಾರಿ ಕರ್ತವ್ಯಗಳ ನಿರ್ವಹಣೆಗೆ ಅಡ್ಡಿಯಾಗುತ್ತದೆ. ಹೀಗಾಗಿ ಸರ್ಕಾರಿ ವೈದ್ಯರು ಖಾಸಗಿ ವೈದ್ಯಕೀಯ ಅಭ್ಯಾಸದ ಭಾಗವಾಗಿ ಒಳರೋಗಿಗಳಿಗೆ ಚಿಕಿತ್ಸೆ ನೀಡುವುದು ಕಡ್ಡಾಯ ನಿಷೇಧಿಸಲಾಗಿದೆ. ಆದರೆ ಅಧಿಕೃತ ಕರ್ತವ್ಯ ಸಮಯ ಹೊರತು ಪಡಿಸಿ ಖಾಸಗಿ OPD ಸೇವೆ ನೀಡಲು ಅವಕಾಶ ಕಲ್ಪಿಸಲಾಗಿದೆ. ಒಂದೇ ಖಾಸಗಿ ಆಸ್ಪತ್ರೆ ಅಥವಾ ಕ್ಲಿನಿಕ್‌ನಲ್ಲಿ ಮಾತ್ರ ಅಭ್ಯಾಸ ಮಾಡುವುದಕ್ಕೆ ಅವಕಾಶ ನೀಡಲಾಗಿದೆ. ಆ ಕುರಿತ ಸಂಪೂರ್ಣ ವಿವರಗಳನ್ನು ಸರ್ಕಾರಕ್ಕೆ ಒದಗಿಸಬೇಕು. ಇನ್ನು ನಿಯಮ ಉಲ್ಲಂಘಿಸುವ ವೈದ್ಯರ ವಿರುದ್ಧ ಶಿಸ್ತು ಕ್ರಮದ ಎಚ್ಚರಿಕೆ ಕೂಡ ನೀಡಲಾಗಿದೆ.

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *