Share this news

ಬೆಂಗಳೂರು,10: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ನಾಳೆಯಿಂದ (ಮಾರ್ಚ್ 11) ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯದ ಸರ್ಕಾರಿ ಆಸ್ಪತ್ರೆಗಳ ವೈದ್ಯರು ನಾಳೆಯಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದಾರೆ. ಇದರಿಂದಾಗಿ ರಾಜ್ಯದ ಹಲವಾರು ಸರ್ಕಾರಿ ಆಸ್ಪತ್ರೆಗಳಲ್ಲಿ ಓಪಿಡಿ (OPD) ಸೇವೆಗಳು ಸ್ಥಗಿತಗೊಳ್ಳುವ ಸಾಧ್ಯತೆ ಇದೆ.

ಜ್ವರ, ಕೆಮ್ಮು, ಚರ್ಮ ಸಂಬಂಧಿತ ಸಮಸ್ಯೆಗಳು, ಸ್ಕ್ಯಾನಿಂಗ್ ಅಥವಾ ರಕ್ತ ಪರೀಕ್ಷೆ ಸೇರಿದಂತೆ ಸಾಮಾನ್ಯ ಚಿಕಿತ್ಸೆಗೆ ಸರ್ಕಾರಿ ಆಸ್ಪತ್ರೆಗಳ ಮೇಲೆ ಅವಲಂಬಿತರಾಗಿರುವ ರೋಗಿಗಳಿಗೆ ಇದು ದೊಡ್ಡ ತೊಂದರೆಯಾಗುವ ಆತಂಕ ವ್ಯಕ್ತವಾಗಿದೆ.
ವಿಶೇಷವಾಗಿ ಬಡ ಮತ್ತು ಮಧ್ಯಮ ವರ್ಗದ ಜನರು ಹೆಚ್ಚಾಗಿ ಸರ್ಕಾರಿ ಆಸ್ಪತ್ರೆಗಳನ್ನೇ ಅವಲಂಬಿಸುತ್ತಿರುವುದರಿಂದ ಪರಿಸ್ಥಿತಿ ಗಂಭೀರವಾಗುವ ಸಾಧ್ಯತೆ ಇದೆ.

ಕಳೆದ ನಾಲ್ಕು ವರ್ಷಗಳಿಂದ ನಡೆಯದಿರುವ ವೃಂದ ಮತ್ತು ನೇಮಕಾತಿ ಪ್ರಕ್ರಿಯೆ, 13 ವರ್ಷಗಳಿಂದ ಪರಿಷ್ಕರಣೆಗೊಳ್ಳದ ವೈದ್ಯರ ಜೇಷ್ಠಾತಾ ಪಟ್ಟಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಗಳ ಕೊರತೆ ಸೇರಿದಂತೆ ಒಟ್ಟು 15 ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಸಂಘವು ಹೋರಾಟಕ್ಕೆ ಮುಂದಾಗಿದೆ.
ವೈದ್ಯರ ಬೇಡಿಕೆಗಳನ್ನು ಚರ್ಚಿಸಲು ಆರೋಗ್ಯ ಇಲಾಖೆ ಇದುವರೆಗೆ ಏಳು ಸಭೆಗಳನ್ನು ನಡೆಸಿದೆ. ಮಾರ್ಚ್ 2ರಂದು ಆರೋಗ್ಯ ಸಚಿವರ ಸಮ್ಮುಖದಲ್ಲಿ ನಡೆದ ಸಭೆಯೂ ಫಲಪ್ರದವಾಗಲಿಲ್ಲ. ಸರ್ಕಾರದಿಂದ ಯಾವುದೇ ಲಿಖಿತ ಭರವಸೆ ಸಿಗದ ಹಿನ್ನೆಲೆಯಲ್ಲಿ ವೈದ್ಯರು ಮುಷ್ಕರಕ್ಕೆ ಮುಂದಾಗಿದ್ದಾರೆ. ಅಲ್ಲದೆ ಮಾರ್ಚ್ 16ರಿಂದ ಸಾಮೂಹಿಕವಾಗಿ ಕರ್ತವ್ಯಕ್ಕೆ ಗೈರಾಗುವ ಎಚ್ಚರಿಕೆಯನ್ನು ಸಹ ನೀಡಿದ್ದಾರೆ.

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

Leave a Reply

Your email address will not be published. Required fields are marked *