Share this news

 

 

ಕಾರ್ಕಳ : ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಹಲವಾರು ಶಾಸಕರುಗಳು ಕಾರ್ಯನಿರ್ವಹಿಸಿದ್ದು, ಕ್ಷೇತ್ರದ ಅಭಿವೃದ್ಧಿಯಾಗಿದ್ದು 2004 ರಲ್ಲಿ ವಿ ಸುನಿಲ್ ಕುಮಾರ್ ರವರು ಶಾಸಕರಾಗಿ ಆಯ್ಕೆಯಾದ ಬಳಿಕ ಎನ್ನುವುದು ನಿರ್ವಿವಾದ. ಕಾರ್ಕಳದಲ್ಲಿ ಹಲವು ಖಾಸಗಿ ಶಿಕ್ಷಣ ಸಂಸ್ಥೆಗಳು ಉತ್ತಮ ಶಿಕ್ಷಣ ನೀಡುತ್ತಿದ್ದರೂ,ಕಾರ್ಕಳವನ್ನು ಶೈಕ್ಷಣಿಕ ಮತ್ತು ಪ್ರವಾಸೋದ್ಯಮ ಕ್ಷೇತ್ರದಲ್ಲಿ ಅಭಿವೃದ್ಧಿಯತ್ತ ಕೊಂಡೊಯ್ಯಬೇಕೆಂಬ ನಿಟ್ಟಿನಲ್ಲಿ ಕಾರ್ಕಳವನ್ನು ಶೈಕ್ಷಣಿಕ ಹಬ್ ಆಗಿ ಮಾಡಬೇಕೆನ್ನುವ ಮಹದಾಸೆಯಿಂದ ಈ ಹಿಂದಿನ ಬಿಜೆಪಿ ನೇತೃತ್ವದ ಸರಕಾರ ಇದ್ದಾಗ ಕಾರ್ಕಳ ತಾಲೂಕಿನಲ್ಲಿ 40 ಸೀಟುಗಳ ಬಿ.ಎಸ್ಸಿ ನರ್ಸಿಂಗ್ ಕಾಲೇಜನ್ನು ಆರಂಭಿಸಲಾಗಿತ್ತು. ಇದು ವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಪ್ರಥಮ ಸರಕಾರಿ ನರ್ಸಿಂಗ್ ಕಾಲೇಜು ಆಗಿದ್ದು, ಆ ನಂತರ ಸರಕಾರದ ಅಧೀನ ಕಾರ್ಯದರ್ಶಿ ಕಾಲೇಜಿನ ಮೂಲಭೂತ ಸೌಕರ್ಯಗಳಿಗೆ ಅನುದಾನ ಒದಗಿಸುವಂತೆ ಆದೇಶ ಹೊರಡಿಸಿರುತ್ತಾರೆ. ಆದರೆ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ನಂತರ ಈ ಎಲ್ಲಾ ಅಭಿವೃಧಿ ಯೋಜನೆಗಳು ಕುಂಠಿತವಾಗಿದ್ದು, ಅದರಲ್ಲಿಯು ಶೈಕ್ಷಣಿಕ ಕ್ಷೇತ್ರಕ್ಕೂ ಅನುದಾನ ಸ್ಥಗಿತಗೊಳಿಸಿರುವುದು ವಿಪರ್ಯಾಸ ಎಂದು ಕಾರ್ಕಳ ಬಿಜೆಪಿ ವಕ್ತಾರ ರವೀಂದ್ರ ಮೊಯಿಲಿ ಹೇಳಿದ್ದಾರೆ.

ಪ್ರಸ್ತುತ ಕಾರ್ಕಳ ನರ್ಸಿಂಗ್ ಕಾಲೇಜಿನಲ್ಲಿ ಮೂರು ಬ್ಯಾಚಿನಲ್ಲಿ ನೂರಕ್ಕೂ ಅಧಿಕ ವಿಧ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಈಗಾಗಲೇ ನರ್ಸಿಂಗ್ ಕಾಲೇಜು ನಿರ್ಮಾಣದ ಉದ್ದೇಶಕ್ಕೆ ಕಾರ್ಕಳ ಕಸಬಾ ಗ್ರಾಮದ ಸರ್ವೆ ನಂಬ್ರ ೬೧೦/೩ ಪಿ ೧ ವಿಸ್ತೀರ್ಣ ೨.೦೦ ಎಕ್ರೆ ಜಮೀನನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆ ಹೆಸರಿನಲ್ಲಿ ಕಾಯ್ದಿರಿಸಲಾಗಿದೆ. ಪ್ರಸ್ತುತ ಕಾಂಗ್ರೆಸ್ ಆಡಳಿತದಲ್ಲಿ ನರ್ಸಿಂಗ್ ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯಗಳಿಗೂ ತೊಡಕು ಉಂಟಾಗಿದ್ದು, ಅಲ್ಲದೆ ಕಾಲೇಜಿಗೆ ಅಗತ್ಯವಿರುವ ಭೋದಕ ಮತ್ತು ಭೋದಕೇತರ ಸಿಬ್ಬಂದಿಗಳನ್ನು ನೇಮಕಾತಿ ಮಾಡುವ ಬಗ್ಗೆ ಶಾಸಕರು ಈಗಾಗಲೇ ಹಲವು ಬಾರಿ ಸಂಬಂಧಪಟ್ಟ ಇಲಾಖೆಗೆ ಪತ್ರ ಬರೆದು ಮನವಿ ಮಾಡಿದ್ದರೂ ಸರಕಾರದಿಂದ ಯಾವುದೇ ಸಕಾರಾತ್ಮಕ ಪ್ರತಿಕ್ರಿಯೆ ಬಂದಿಲ್ಲ. ಈಗಾಗಲೇ ಶಾಸಕರ ಮುತುವರ್ಜಿಯಿಂದ ಕೆಲವು ಖಾಸಗಿ ಕಂಪೆನಿಗಳು ತಮ್ಮ ಸಿಎಸ್‌ಆರ್ ಫಂಡಿನ ಮೂಲಕ ಕಾಲೇಜಿನ ಮೂಲಭೂತ ಸೌಕರ್ಯಗಳಿಗೆ ಅನುದಾನ ನೀಡಿ ಸಹಕರಿಸಿದ್ದಾರೆ. ಸರಕಾರವು ಭೋದಕ ಮತ್ತು ಭೋದಕೇತರ ಸಿಬ್ಬಂದಿಯನ್ನು ನೇಮಕ ಮಾಡಿ ಕಾಲೇಜಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿದರೆ ಖಾಸಗಿ ಸಹಯೋಗದೊಂದಿಗೆ ಕಾಲೇಜಿನ ಕಟ್ಟಡ ನಿರ್ಮಾಣ ಮಾಡುವ ಬಗ್ಗೆಯೂ ಕೂಡ ಶಾಸಕರು ಮುಂದಾಗಿದ್ದಾರೆ. ಕಾರ್ಕಳ ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷರು ಮಾಹಿತಿ ಕೊರತೆಯಿಂದಾಗಿಯೋ ಅಥವಾ ಪ್ರಚಾರದ ತೆವಲಿನಿಂದಾಗಿಯೋ ಕಾರ್ಕಳದ ಶಾಸಕರನ್ನು ದೂಷಿಸಿ ಪ್ರತ್ರಿಕಾ ಹೇಳಿಕೆ ನೀಡಿರುವುದು ಸಮಂಜಸವಲ್ಲ.
ಇನ್ನಾದರೂ ಕಾರ್ಕಳ ಕಾಂಗ್ರೆಸ್ ನಾಯಕರುಗಳು ಕಾರ್ಕಳದ ಅಭಿವೃದ್ಧಿಗೆ ಅಡ್ದಗಾಲು ಹಾಕದೆ ವಿಧ್ಯಾರ್ಥಿಗಳ ಭವಿಷ್ಯದ ದೃಷ್ಠಿಯಿಂದ ಕಾರ್ಕಳದ ನರ್ಸಿಂಗ್ ಕಾಲೇಜಿಗೆ ಬೇಕಾಗುವ ಮೂಲಭೂತ ಸೌಕರ್ಯ ಒದಗಿಸುವ ಬಗ್ಗೆ ತಮ್ಮ ಸರಕಾರಕ್ಕೆ ಮನವರಿಕೆ ಮಾಡಿಕೊಟ್ಟು ಕಾರ್ಕಳದ ಅಭಿವೃದ್ಧಿಗೆ ಸಹಕಾರ ನೀಡಬೇಕ್ಕೆ ವಿನಹ ಬಾಯಿಚಪಲಕ್ಕಾಗಿ ಪತ್ರಿಕ ಹೇಳಿಕೆಯನ್ನು ನೀಡುವುದನ್ನು ನಿಲ್ಲಿಸಬೇಕು ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *