ಬಳ್ಳಾರಿಯಲ್ಲಿ ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು, ನಂದಿನಿ ಹಾಲಿನ ದರ ಹೆಚ್ಚಳ ಮಾಡುವಂತೆ ಒತ್ತಡ ಇದೆ. ಸಂಬAಧಿಸಿದ ನಿಗಮಗಳ ಸಭೆ ಕರೆದು ಚರ್ಚೆ ಮಾಡಲಾಗಿದ್ದು, 5 ರೂ. ಹೆಚ್ಚಳ ಮಾಡಬೇಕೆಂಬ ಅಭಿಪ್ರಾಯ ವ್ಯಕ್ತವಾಗಿದೆ. ಹೆಚ್ಚಳ ಮಾಡಿದ ದರವನ್ನು ರೈತರಿಗೆ ನೀಡಬೇಕೆಂದು ಚರ್ಚಿಸಲಾಗಿದೆ. ಸಭೆಯಲ್ಲಿ ಚರ್ಚಿಸಿದ ವಿಷಯವನ್ನು ಸರ್ಕಾರಕ್ಕೆ ತಿಳಿಸಿದ್ದೇವೆ. ಪಶುಸಂಗೋಪನೆ ಇಲಾಖೆ ಸೇರಿದಂತೆ ಸಂಬAಧಿಸಿದ ಇಲಾಖೆಗಳಿಂದ ದರ ಹೆಚ್ಚಳದ ಬಗ್ಗೆ ಒತ್ತಡ ಇದೆ. ಆದರೆ, ಸರ್ಕಾರದಿಂದ ಯಾವುದೇ ನಿರ್ಧಾರ ಹೊರಬಂದಿಲ್ಲ. ಹಾಲಿನ ದರ ಹೆಚ್ಚಳ ಬಗ್ಗೆ ಸರ್ಕಾರ ತೀರ್ಮಾನ ಮಾಡಿಲ್ಲ ಎಂದು ತಿಳಿಸಿದ್ದಾರೆ.
ಹಾಲಿನ ದರ ಏರಿಕೆಗಾಗಿ ರಾಜ್ಯ ಸರ್ಕಾರದ ಮೇಲೆ ಹಾಲು ಒಕ್ಕೂಟಗಳು ಒತ್ತಡ ಹೇರುತ್ತಿದ್ದು, ಲೀಟರ್ ಗೆ 5 ರೂಪಾಯಿ ಹೆಚ್ಚಳ ಮಾಡುವಂತೆ ಬೇಡಿಕೆ ಇಟ್ಟಿವೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿತ್ತು. ಕಳೆದ ತಿಂಗಳು ಪಶು ಸಂಗೋಪನಾ ಸಚಿವರು ಕೆಎಂಎಫ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಸಭೆಯಲ್ಲಿ ಹಾಲಿನ ದರ ಏರಿಕೆ ಮಾಡಬೇಕಾದ ಅನಿವಾರ್ಯತೆ ಕುರಿತು ಚರ್ಚೆಯಾಗಿತ್ತು. ಈ ವೇಳೆ ಹಾಲಿನ ದರ ಲೀಟರಿಗೆ 5 ರೂಪಾಯಿ ಏರಿಸಬೇಕು ಎಂದು ಒಕ್ಕೂಟಗಳು ಪ್ರಸ್ತಾವನೆ ಸಲ್ಲಿಸಿದ್ದವು. ಸಂಗೋಪನೆಯ ಖರ್ಚು ವೆಚ್ಚಗಳ ಹೆಚ್ಚಳದಿಂದ ಬೆಲೆ ಏರಿಸಲೇ ಬೇಕಾದ ಅನಿವಾರ್ಯತೆ ಉಂಟಾಗಿದೆ ಎಂದು ಹೇಳಿದ್ದವು.
