Share this news

ಬೆಂಗಳೂರು: ಸೈಬರ್ ವಂಚಕರ‌ ಹೆಡೆಮುರಿ ಕಟ್ಟಲು ರಾಜ್ಯ ಸರ್ಕಾರ ಸಜ್ಜಾಗಿದ್ದು, ದೇಶದ ಮೊದಲ ಸೈಬರ್ ಕಮಾಂಡ್ ಸೆಂಟರ್ ಕರ್ನಾಟಕದಲ್ಲಿ ಸ್ಥಾಪನೆಯಾಗಿದೆ.

ಸೈಬರ್ ವಂಚನೆಗೆ ಕಡಿವಾಣ ಹಾಕಲು ಹೈಕೋರ್ಟ್ ‌ಸರ್ಕಾರಕ್ಕೆ ಸೂಚನೆ ಕೊಟ್ಟಿತ್ತು. ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 8 ರಂದು ದೇಶದಲ್ಲೇ ಮೊದಲ ಸೈಬರ್ ಕಮಾಂಡ್ ಸೆಂಟರ್ ಅನ್ನು ಬೆಂಗಳೂರಲ್ಲಿ ತೆರೆಯಲಾಗಿದೆ. ಪ್ರಣಬ್ ಮೊಹಂತಿಯವರನ್ನ ಡಿಐಜಿಯಾಗಿ ಕಮಾಂಡ್ ಸೆಂಟರ್‌ಗೆ ನೇಮಕ ಮಾಡಲಾಗಿದೆ.

ಕೇವಲ ಸೈಬರ್ ಫ್ರಾಡ್ ಪತ್ತೆಗೆ ಸಿದ್ದವಾಗಿರುವ ಕಮಾಂಡ್ ಸೆಂಟರ್‌ನಲ್ಲಿ ನಾಲ್ಕು ವಿಂಗ್‌ಗಳು ಕಾರ್ಯನಿರ್ವಹಣೆ ಮಾಡಲಿವೆ.

1. ಸೈಬರ್ ಕ್ರೈಂ ವಿಂಗ್:
ಸೈಬರ್ ಅಪರಾಧಗಳನ್ನ ಪತ್ತೆ ಮಾಡಿ, ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತೆ.

2. ಸೈಬರ್ ಸೆಕ್ಯೂರಿಟಿ ವಿಂಗ್:
ಬ್ಯಾಂಕ್ ಖಾತೆ, ಸಾಮಾಜಿಕ ಜಾಲತಾಣ, ಸಾಫ್ಟ್‌ವೇರ್ ಹ್ಯಾಕ್ ಮಾಡುವವರನ್ನ ಪತ್ತೆ ಮಾಡುತ್ತೆ.

3. IDTU ವಿಂಗ್: ಸೈಬರ್ ಅಪರಾಧಿಗಳ ಸ್ಥಳ ಪತ್ತೆ ಮಾಡುವುದು, ಸಾಮಾಜಿಕ ಜಾಲತಾಣಗಳ ಸಂಸ್ಥೆಗಳಿಂದ ಮಾಹಿತಿ ಪಡೆಯುವುದು. ಐಪಿ ಅಡ್ರೆಸ್‌ ಪತ್ತೆ ಮಾಡುತ್ತೆ

4. ತರಬೇತಿ, ಸಾಮರ್ಥ್ಯ ವೃದ್ಧಿ ಮತ್ತು ಜನಜಾಗೃತಿ ದಳ:
ಸೈಬರ್ ಕಮಾಂಡ್ ಸೆಂಟರ್ ಅಧಿಕಾರಿಗಳಿಗೆ‌ ತರಬೇತಿ ನೀಡುವುದು. ಟೆಕ್ನಿಕಲ್ ಜ್ಞಾನ ವೃದ್ಧಿ ಮಾಡುವುದು. ಹೊಸ ತಂತ್ರಜ್ಞಾನಗಳ ತಿಳುವಳಿಕೆ ನೀಡುವುದು. ಮತ್ತು ಸಾರ್ವಜನಿಕರು ಮತ್ತು ವಿಧ್ಯಾರ್ಥಿಗಳಿಗೆ ಸೈಬರ್ ಅಪರಾಧ ಅರಿವು ಮೂಡಿಸುವ ಕೆಲಸ ಮಾಡುತ್ತೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *