
ಬೆಂಗಳೂರು,ಜೂ23: ರಾಜ್ಯದಲ್ಲಿ ವಸತಿ ಕಟ್ಟಡಗಳ ಶಾಶ್ವತ ವಿದ್ಯುತ್ ಸಂಪರ್ಕಕ್ಕೆ ಎದುರಾಗುತ್ತಿದ್ದ ತೊಂದರೆ ನಿವಾರಣೆಗೆ ಮಹತ್ವದ ನಿರ್ಧಾರ ಕೈಗೊಂಡಿರುವ ರಾಜ್ಯ ಸರಕಾರ, ಸಾರ್ವಜನಿಕರ ಹಿತದೃಷ್ಟಿಯಿಂದ ನಿರ್ದಿಷ್ಟ ಮಿತಿಯೊಳಗಿನ ವಸತಿ ಕಟ್ಟಡಗಳಿಗೆ ಶಾಶ್ವತ ವಿದ್ಯುತ್ ಸಂಪರ್ಕ ಪಡೆಯಲು ಸ್ವಾಧೀನಾ-ನುಭವ ಪ್ರಮಾಣಪತ್ರ (ಒಸಿ) ಒದಗಿಸುವುದರಿಂದ ಒಂದು ಬಾರಿಯ ಕ್ರಮವಾಗಿ ವಿನಾಯಿತಿ ನೀಡಿ ಸೋಮವಾರ ಅಧಿಕೃತ ಆದೇಶ ಹೊರಡಿಸಿದೆ.
ವಿನಾಯಿತಿ 31 ಮೇ 2026ರೊಳಗಾಗಿ ಶಾಶ್ವತ ವಿದ್ಯುತ್ ಸಂಪರ್ಕಕ್ಕಾಗಿ ಅರ್ಜಿ ಸಲ್ಲಿಸಿರುವವರು, ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದು ಕಟ್ಟಡ ನಿರ್ಮಿಸಿರುವವರು ಹಾಗೂ ಯಾವುದೇ ವಿದ್ಯುತ್ ಸಂಪರ್ಕ ಪಡೆಯದೇ ಕಟ್ಟಡ ಪೂರ್ಣಗೊಳಿಸಿರುವವರಿಗೆ ಮಾತ್ರ ಅನ್ವಯಿಸುತ್ತದೆ. ಇಂತಹ ಅರ್ಜಿದಾರರಿಗೆ ಆದೇಶ ಹೊರಡಿಸಿದ ದಿನಾಂಕದಿಂದ 15 ದಿನಗಳವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಒಂದು ಬಾರಿಗೆ ಸ್ವಾಧೀನಾನುಭವ ಪ್ರಮಾಣಪತ್ರ ಪಡೆಯುವುದರಿಂದ ವಿದ್ಯುತ್ ಸಂಪರ್ಕಕ್ಕೆ ವಿನಾಯಿತಿ ದೊರೆಯಲಿದೆ.ಗ್ರಾಮೀಣ ಪ್ರದೇಶಗಳಲ್ಲಿ ರೈತರು ವಾಸಿಸುವ ಮನೆ, ತೋಟದ ಮನೆ, ಕೃಷಿ ಉಪಕರಣಗಳನ್ನು ಇಡುವ ಮನೆ, ದನದ ಕೊಟ್ಟಿಗೆ, ರೇಷ್ಮೆ ಗೂಡಿನ ಮನೆ – ಇವುಗಳಿಗೆ ವಿದ್ಯುತ್ ಸಂಪರ್ಕಕ್ಕಾಗಿ ಸ್ವಾಧೀನಾನುಭವ ಪ್ರಮಾಣಪತ್ರ ಪಡೆಯುವುದರಿಂದ, ವಿನಾಯಿತಿ ನೀಡಲಾಗಿದೆ. ವಿದ್ಯುತ್ ಸರಬರಾಜು ಕಂಪನಿಗಳು ಅನುಸರಿಸಬೇಕಾದ ಸಾಮಾನ್ಯ ಮಾರ್ಗಸೂಚಿಗಳನ್ನು ಪ್ರತ್ಯೇಕವಾಗಿ ಹೊರಡಿಸಲು ತೀರ್ಮಾನಿಸಲಾಗಿದೆ. ಇನ್ನು ಈ ನಿರ್ಧಾರದಿಂದ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಕಟ್ಟಡಗಳಿಗೆ ಶಾಶ್ವತ ವಿದ್ಯುತ್ ಸಂಪರ್ಕ ಪಡೆಯುವ ಪ್ರಕ್ರಿಯೆ ಸುಗಮವಾಗಲಿದೆ ಎಂದು ಸರ್ಕಾರ ವಿಶ್ವಾಸ ವ್ಯಕ್ತಪಡಿಸಿದೆ.



.
.
.
.
.
.
.
.
.
.
.
.
.
.
.
.
.
.
.
.
