Share this news

ಬೆಂಗಳೂರು : ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಪ್ರತಿಯಾಗಿ 2024-25 ನೇ ಸಾಲಿನಲ್ಲಿ ಪ್ರಾಥಮಿಕ ಶಾಲೆಗಳಿಗೆ 35 ಸಾವಿರ, ಪ್ರೌಢಶಾಲೆಗಳಿಗೆ 10 ಸಾವಿರ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ವಿಷಯದ ಕುರಿತಂತೆ 2024-25 ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಖಾಯಂ ಶಿಕ್ಷಕರ ನೇಮಕವಾಗುವವರೆಗೆ ಅಥವಾ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ಯಾವುದು ಮೊದಲೋ ಅಲ್ಲಿಯವರೆಗೆ ಶಿಕ್ಷಕರ ಕೊರತೆಯನ್ನು ನೀಗಿಸುವ ದೃಷ್ಟಿಯಿಂದ ಒಟ್ಟು 35 ಸಾವಿರ ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಉಲ್ಲೇಖ-01ರ ಸರ್ಕಾರದ ಪತ್ರದಲ್ಲಿ ಅನುಮತಿ ನೀಡಲಾಗಿದೆ.
ಉಲ್ಲೇಖ-01 ರಲ್ಲಿ ಒಟ್ಟು 35 ಸಾವಿರ ಹುದ್ದೆಗಳಿಗೆ ಅಥಿತಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಸರ್ಕಾರ ಸಹಮತಿಸಿದ್ದು ಪ್ರಸ್ತುತ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ (ಪಿ.ಎಸ್.ಟಿ ಮತ್ತು ಜಿ.ಪಿ.ಟಿ) ಒಟ್ಟು 33,863 ಹುದ್ದೆಗಳಿಗೆ ಜಿಲ್ಲಾವಾರು/ ತಾಲೂಕುವಾರು ಅತಿಥಿ ಶಿಕ್ಷಕರನ್ನು ಉಲ್ಲೇಖ-02 & 03 ರ ಪತ್ರದಲ್ಲಿ ವಿಧಿಸಿರುವ ಷರತ್ತುಗಳಿಗೊಳಪಟ್ಟು ನೇಮಕ ಮಾಡಿಕೊಳ್ಳಲು ಅನುಮತಿ ನೀಡಲಾಗಿದೆ.

 

 

ಪ್ರೌಢಶಾಲೆಗಳಿಗೆ 10 ಸಾವಿರ ಅಥಿತಿ ಶಿಕ್ಷಕರ ನೇಮಕಾತಿ :

ಮೇಲ್ಕಂಡ ವಿಷಯ ಹಾಗೂ ಉಲ್ಲೇಖ (1) ರನ್ವಯ 2024-25ನೇ ಸಾಲಿನಲ್ಲಿ ಸರ್ಕಾರಿ ಪ್ರೌಢಶಾಲೆಗಳಲ್ಲಿನ ಖಾಲಿ ಇರುವ ವಿಷಯ ಶಿಕ್ಷಕರ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿಯಿಂದ ನೇರ ನೇಮಕಾತಿ/ಬಡ್ತಿ/ವರ್ಗಾವಣೆ ಮೂಲಕ ಭರ್ತಿ ಮಾಡುವವರೆಗೆ ಅಥವಾ ಪ್ರಸಕ್ತ ಶೈಕ್ಷಣಿಕ ಸಾಲಿನ ಅಂತ್ಯದವರೆಗೆ ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಒಟ್ಟು 10 ಸಾವಿರ ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಸೂಚಿಸಲಾಗಿದೆ

ಅದರಂತೆ 2024-25ನೇ ಸಾಲಿನಲ್ಲಿ ಮೊದಲ ಹಂತದಲ್ಲಿ ಸರ್ಕಾರಿ ಪ್ರೌಢಶಾಲೆಗಳಲ್ಲಿನ ಪ್ರಸ್ತುತ ಖಾಲಿ ಇರುವ 8954 ವಿಷಯ ಶಿಕ್ಷಕರ ಹುದ್ದೆಗಳಿಗೆದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿಯಿಂದ ನೇರ ನೇಮಕಾತಿ/ಬಡ್ತಿ/ವರ್ಗಾವಣೆ ಮೂಲಕ ಭರ್ತಿ ಮಾಡುವವರೆಗೆ ಅಥವಾ ಪ್ರಸಕ್ತ ಶೈಕ್ಷಣಿಕ ಸಾಲಿನ ಅಂತ್ಯದವರೆಗೆ ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಒಟ್ಟು 8,954 ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ಗೌರವಧನದ ಆಧಾರದ ಮೇಲೆ ಈ ಕೂಡಲೇ ನೇಮಕ ಮಾಡಿಕೊಳ್ಳಲು ಈ ಕೆಳಕಂಡ ಷರತ್ತುಗಳಿಗೊಳಪಟ್ಟು ಸರ್ಕಾರ ಅನುಮತಿ ನೀಡಿದೆ.

 

 

 

 

                        

                          

 

 

 

 

 

                        

                          

 

Leave a Reply

Your email address will not be published. Required fields are marked *