Share this news

ಕಾರ್ಕಳ,ಮಾ.18: ಪಂಚ ಗ್ಯಾರಂಟಿ ಯೋಜನೆಯಿಂದಾಗಿ ರಾಜ್ಯದಲ್ಲಿ ಜನರ ಜೀವನ ಸುಧಾರಣೆಯಾಗಿದ್ದು, ಗೃಹ ಲಕ್ಷ್ಮೀ ಯೋಜನೆಯಿಂದ ಮಹಿಳೆಯರ ಹಕ್ಕುಗಳನ್ನು ರಕ್ಷಿಸಲು ಸಾಧ್ಯವಾಗಿದೆ ಎಂದು ಉದಯ ಶೆಟ್ಟಿ ಮುನಿಯಾಲು ಹೇಳಿದ್ದಾರೆ.

ಅವರು ಹೆಬ್ರಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಶಿರ್ಲಾಲು ಗ್ರಾಮೀಣ ಕಾಂಗ್ರೆಸ್ ಆಶ್ರಯದಲ್ಲಿ ನಡೆದ ಗ್ರಾಮೋದಯ ಜನಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸರಕಾರ ಮತ್ತು ಜನರ ನಡುವಿನ ಕೊಂಡಿಯಾಗಿ ಕೆಲಸ ಮಾಡುವ ದೃಷ್ಟಿಯಿಂದ ಜನಪ್ರತಿನಿಧಿಗಳು ಶ್ರಮಿಸಬೇಕು ಎಂದರು.

ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಗೋಪಿನಾಥ್ ಭಟ್ ಮಾತನಾಡಿ, ಬೂತ್ ಮಟ್ಟದಲ್ಲಿ ಪಕ್ಷ ಬಲವರ್ಧನೆಗೆ ಕಾರ್ಯಕರ್ತರು ಶ್ರಮಿಸಬೇಕು. ಪಕ್ಷದ ಬೆಳವಣಿಗೆಗೆ ಕಾರ್ಯಕರ್ತರು ಜೊತೆಯಾಗಿ ಕೆಲಸ ಮಾಡಬೇಕು ಎಂದರು. ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ್ ರಾವ್ ಮಾತನಾಡಿ, ಉದಯ್ ಕುಮಾರ್ ಶೆಟ್ಟಿ ಅವರು ಜನರಿಗಾಗಿ ಗ್ರಾಮಮಟ್ಟದಲ್ಲಿ ವಾಸ್ತವ್ಯ ಹೂಡುವ‌ ಮೂಲಕ ಜನರ ಸಮಸ್ಯೆಗಳಿಗೆ ಕಿವಿಯಾಗುತ್ತಿದ್ದಾರೆ. ತಮ್ಮ ಹಕ್ಕಿಗಾಗಿ ಜನಪ್ರತಿನಿಧಿಗಳ ಕಚೇರಿಗೆ ಅಲೆಯುವ ಸನ್ನಿವೇಶ ಬದಲಾಗಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಶಿರ್ಲಾಲು ಗ್ರಾಮೀಣ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಅರುಣ್ ಪ್ರಸಾದ್, ಹೆಬ್ರಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ‌ಅಧ್ಯಕ್ಷ ಶಂಕರ ಶೇರಿಗಾರ, ರಂಜಿತ್, ಅಜೆಕಾರು ಗ್ರಾಮೀಣ ಅಧ್ಯಕ್ಷ ಸಂದೀಪ್ ಶೆಟ್ಟಿ , ಕೆ.ಎಮ್.ಎಪ್ ನಿರ್ದೇಶಕರಾದ ಸುಧಾಕರ್ ಶೆಟ್ಟಿ ಮುಡಾರು, ಜಯಕುಮಾರ್ ಜೈನ್, ಗಿರೀಶ್, ರಾಕೇಶ್, ಪ್ರಕಾಶ್ ಪೂಜಾರಿ, ನಾರಾಯಣ ನಾಯ್ಕ್ , ಸುನೀಲ್, ಸುನೀತಾ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
ಅಜಿತ್ ಕಾರ್ಯಕ್ರಮ ನಿರೂಪಿಸಿ, ಪ್ರದೀಪ್ ಬೇಲಾಡಿ ಧನ್ಯವಾದವಿತ್ತರು.

  

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

Leave a Reply

Your email address will not be published. Required fields are marked *