ಕಾರ್ಕಳ ಸೆ,11 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಉಪಸ್ಥಿತಿಯಲ್ಲಿ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಅಜಿತ್ ಹೆಗ್ಡೆ ಅವರ ಅಧ್ಯಕ್ಷತೆಯಲ್ಲಿ ಗ್ಯಾರಂಟಿ ಯೋಜನೆಗಳ ಸಮಾವೇಶವು ನಾಳೆ ಕಾರ್ಕಳದ ಮಂಜುನಾಥ ಪೈ ಸಭಾಂಗಣದಲ್ಲಿ ಅಪರಾಹ್ನ 3 ಗಂಟೆಗೆ ನಡೆಯಲಿದೆ.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಸಮಾವೇಶದಲ್ಲಿ ಪಾಲ್ಗೊಂಡು ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಪ್ರಕಟಣೆ ತಿಳಿಸಿದೆ.