ಕಾರ್ಕಳ: ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾಗಿರುವ ಐದು ಗ್ಯಾರಂಟಿ ಯೋಜನೆಗಳು ಪ್ರತಿಯೊಬ್ಬ ಫಲಾನುಭವಿಗೂ ತಲುಪಬೇಕು. ಈ ನಿಟ್ಟಿನಲ್ಲಿ ಗ್ಯಾರಂಟಿ ಅನುಷ್ಠಾನದಲ್ಲಿನ ಸಮಸ್ಯೆಗಳನ್ನು ಬಗೆಹರಿಸಲು ಗ್ರಾಮ ಅದಲಾತ್ ನಡೆಸಲಾಗುವುದು ಎಂದು ಕಾರ್ಕಳ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಜಿತ್ ಹೆಗ್ಡೆ ಮಾಳ ಹೇಳಿದರು.
ಅವರು ಕಾರ್ಕಳ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ಕಾರ್ಕಳ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರಿಶಿಲನಾ ಸಭೆಯಲ್ಲಿ ಮಾತನಾಡಿ, ಈಗಾಗಲೇ ಕಾರ್ಕಳ ಹಾಗೂ ಹೆಬ್ರಿ ತಾಲೂಕುಗಳಲ್ಲಿ ಶೇ 90ರಷ್ಟು ಗ್ಯಾರಂಟಿ ಯೋಜನೆಗಳಲ್ಲಿ ಪ್ರಗತಿ ಸಾಧಿಸಲಾಗಿದ್ದು, ಶೇ 10 ರಷ್ಟು ಅವಕಾಶ ವಂಚಿತರ ಸಮಸ್ಯೆಗಳ ಕುರಿತು ಚರ್ಚೆಗೆ ಅವಕಾಶ ಸಿಗಲಿದ್ದು, ಈ ಅದಾಲತ್ ನಿಂದ ಗ್ರಾಮ ಮಟ್ಟದಲ್ಲಿ ಸಮಸ್ಯೆಯನ್ನು ಬಗೆಹರಿಸಲು ಸಾಧ್ಯವಾಗಲಿದೆ. ಇನ್ನಾ ಗ್ರಾಮದಿಂದ ಗ್ರಾಮ ಅದಾಲತ್ ಕಾರ್ಯಕ್ರಮ ಆರಂಭಿಸಲಾಗುವುದು ಎಂದರು.
ಸರ್ಕಾರಿ ಬಸ್ಸುಗಳಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕೆ ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿಯನ್ನು ತೋರಿಸಿದರೆ ಒರಿಜಿನಲ್ ಆಧಾರ್ ನೀಡುವಂತೆ ಕಂಡಕ್ಟರ್ ಒತ್ತಾಯಿಸುತ್ತಾರೆ ಎನ್ನುವ ದೂರನ್ನು ಸಮಿತಿಯ ಸದಸ್ಯರು ಸಭೆಯ ಮುಂದಿಟ್ಟರು. ಮಹಿಳೆಯರ ಉಚಿತ ಪ್ರಯಾಣಕ್ಕೆ ಆಧಾರ್ ಜೆರಾಕ್ಸ್ ತೋರಿಸಿದರೂ ಅವಕಾಶ ನೀಡಟಬೇಕು ಹಾಗೂ ಮುಂದಿನ ಸಭೆಗೆ ಡಿಪೋ ಮ್ಯಾನೇಜರ್ ಹಾಜರಾಗುವಂತೆ ಅಧ್ಯಕ್ಷ ಅಜಿತ್ ಹೆಗ್ಡೆ ಸೂಚಿಸಿದರು.
ಕಾರ್ಕಳ ತಾಲೂಕಿನಲ್ಲಿ 29243 ಕುಟುಂಬಗಳು ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಾಗಿದ್ದು, ಕುಟುಂಬದ ಯಜಮಾನ ಹಾಗೂ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಆಗದ ಕಾರಣದಿಂದ 91 ಕಾರ್ಡುಗಳಿಗೆ ಪಡಿತರ ವಿತರಣೆಯಾಗಿಲ್ಲ ಈ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಲಾಗುವುದು ಎಂದು ಆಹಾರ ಇಲಾಖೆಯ ಅಧಿಕಾರಿ ಸಭೆಗೆ ಮಾಹಿತಿ ನೀಡಿದರು. ಸರ್ಕಾರದ ಅನ್ನಭಾಗ್ಯ ಯೋಜನೆ ಅರ್ಹರಿಗೆ ಸಿಗುವಂತಾಗಬೇಕು ಈ ನಿಟ್ಟಿನಲ್ಲಿ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಯೋಜನೆಯ ಮಾಹಿತಿ ಫಲಕಗಳನ್ನು ಪ್ರದರ್ಶಿಸುವಂತೆ ಅಧ್ಯಕ್ಷರು ಸೂಚಿಸಿದರು. ಉಳಿದಂತೆ ಗೃಹ ಲಕ್ಷಿö್ಮÃ, ಗೃಹ ಜ್ಯೋತಿ, ಯುವ ನಿಧಿ ಯೋಜನೆಗಳ ಪ್ರಗತಿ ಕುರಿತಂತೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ವೇದಿಕೆಯಲ್ಲಿ ತಾಲೂಕು ಪಂಚಾಯತ್ ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿ ಪ್ರಶಾಂತ ರಾವ್ ಹಾಗೂ ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು