ಮಧುಗಿರಿ: ಮಹಿಳೆಯರ ಸಬಲೀಕರಣ ವಿಚಾರದಲ್ಲಿ ಭಾರತ ವಿಶ್ವಕ್ಕೆ ಮಾದರಿಯಾಗಿದೆ.ರಾಜಕೀಯ ಕ್ಷೇತ್ರದಲ್ಲಿ ಮಹಿಳೆಯರಿಗೆ ಶೇ.33 ಮೀಸಲು ರಾಜ್ಯಸಭೆಯಲ್ಲಿ ಬಿಲ್ ಪಾಸಾಗಿದ್ದು, ಇಚ್ಛಾಶಕ್ತಿ ಇದ್ದರೆ ಬಿಜೆಪಿ ಮೀಸಲು ಕೊಡಬೇಕಿತ್ತು. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಬಿಲ್ ಪಾಸ್ ಮಾಡುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.
ಅವರು,ಮಧುಗಿರಿಯಲ್ಲಿ ತಾಲೂಕು ಆಡಳಿತ, ತಾಪಂ, ಮಧುಗಿರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಹಿಳಾ ಕಾಂಗ್ರೆಸ್ ಘಟಕ ಹಾಗೂ ಸ್ತ್ರೀಶಕ್ತಿ ಸಂಘ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಗ್ಯಾರಂಟಿಗಳ ನಿಲುಗಡೆ ಎಂಬ ಹೇಳಿಕೆ ಸುಳ್ಳು: ಸಂಸತ್ ಚುನಾವಣೆ ಮುಗಿದ ನಂತರ ಐದು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುತ್ತಾರೆ ಎಂದು ಬಿಜೆಪಿ ಸುಳ್ಳು ಸುದ್ದಿ ಹಬ್ಬಿಸುತ್ತಿದೆ. ಯಾರು ಏನೇ ಹೇಳಿದರೂ ಕೇಳಬೇಡಿ. ಯಾವುದೇ ಕಾರಣಕ್ಕೂ ನಾವು ಅಧಿಕಾರದಲ್ಲಿರುವವರೆಗೂ ಐದು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಮಹಿಳೆಯರ ಸಬಲೀಕರಣಕ್ಕಾಗಿ ಮಾಡಿರುವ ಈ ಯೋಜನೆಗಳು ನಿಲ್ಲುವುದಿಲ್ಲ. ಈಗಾಗಲೇ ನಮ್ಮ ತಾಯಂದಿರಿಗೆ 36 ಸಾವಿರ ಕೋಟಿ ರೂ ನೀಡಿದ್ದು, ಮುಂದಿನ ವರ್ಷಕ್ಕೆ 58 ಸಾವಿರ ಕೋಟಿ ರೂ. ಸಿಎಂ ಸಿದ್ದರಾಮಯ್ಯ ಮೀಸಲಿಟ್ಟಿದ್ದಾರೆ. ಐದು ಗ್ಯಾರಂಟಿ ಯೋಜನೆಗಳಿಂದ ತಮ್ಮ ಕುಟುಂಬ ನಿರ್ವಹಣೆ ಜೊತೆಗೆ ಸ್ವಾವಲಂಬಿ ಜೀವನ ನಡೆಸಲು ಗ್ಯಾರಂಟಿ ಯೋಜನೆಗಳು ದಾರಿದೀಪ ಎಂದು ಡಾ.ಜಿ.ಪರಮೇಶ್ವರ್ ಹೇಳಿದರು. ಕಾಂಗ್ರೆಸ್ ಪಕ್ಷ ಸ್ತ್ರೀ ಶಕ್ತಿ ಸಂಘಗಳನ್ನು ಸ್ಥಾಪಿಸುವ ಮೂಲಕ ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ನೆರವಾಗಿದೆ. ಶೀಘ್ರದಲ್ಲೇ ಲೋಕಸಭಾ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎಸ್.ಪಿ.ಮುದ್ದಹನುಮೇಗೌಡರ ಗೆಲುವಿಗೆ ಮತ ನೀಡಿವಂತೆ ಪರಮೇಶ್ವರ್ ಈ ಸಂದರ್ಭದಲ್ಲಿ ಮನವಿ ಮಾಡಿದರು.
ಗ್ರಾಮ ಲೆಕ್ಕಿಗರ ನೇಮಕಾತಿ 2024: ಕರ್ನಾಟಕ ಕಂದಾಯ ಇಲಾಖೆಯ ಮೂಲಕ 1000 ಗ್ರಾಮ ಲೆಕ್ಕಿಗರ (VA) ಖಾಲಿ ಹುದ್ದೆಗಳಿಗೆ ಈಗಲೇ ಅರ್ಜಿ ಸಲ್ಲಿಸಿ.