
ಬೆಂಗಳೂರು, ಆ. 12: ಸಾರ್ವಜನಿಕರ ಆರೋಗ್ಯ ರಕ್ಷಣೆ ಹಾಗೂ ವ್ಯಸನಮುಕ್ತ ಕರ್ನಾಟಕ ನಿರ್ಮಾಣದ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಒಂದು ಮಹತ್ವದ ಕ್ರಮಕ್ಕೆ ಮುಂದಾಗಿದ್ದು, ತಂಬಾಕು ಮತ್ತು ನಿಕೋಟಿನ್ ಹೊಂದಿರುವ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ, ಸಂಗ್ರಹಣೆ, ಸಾಗಣೆ, ವಿತರಣೆ ಮತ್ತು ಮಾರಾಟವನ್ನು ರಾಜ್ಯಾದ್ಯಂತ ಒಂದು ವರ್ಷದ ಅವಧಿಗೆ ಸಂಪೂರ್ಣವಾಗಿ ನಿಷೇಧಿಸಿದೆ.
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ ಕಲಂ 30(2)(a) ಸೇರಿದಂತೆ Food Safety and Standards Regulations, 2011ರ ನಿಯಮ 2.3.4 ಅಡಿಯಲ್ಲಿ ಈ ಕಠಿಣ ಕ್ರಮ ಜರುಗಿಸಲಾಗಿದೆ. ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯು 2026ರ ಆಗಸ್ಟ್ 10ರಂದು ಈ ಸಂಬAಧ ಅಧಿಕೃತ ಅಧಿಸೂಚನೆ ಹೊರಡಿಸಿದ್ದು, ಅಧಿಸೂಚನೆ ಹೊರಡಿಸಿದ ದಿನಾಂಕದಿAದಲೇ ಈ ಆದೇಶ ಜಾರಿಗೆ ಬಂದಿದೆ. ಪ್ಯಾಕ್ ಮಾಡಿದ ಅಥವಾ ಪ್ರತ್ಯೇಕವಾಗಿ ಮಾರಾಟ ಮಾಡುವ ಎಲ್ಲಾ ಮಾದರಿಯ ನಿಷೇಧಿತ ತಂಬಾಕು ಉತ್ಪನ್ನಗಳ ಮೇಲೆಯೂ ಇಲಾಖೆ ತೀವ್ರ ನಿಗಾ ಇರಿಸಿದೆ.
ರಾಜ್ಯಾದ್ಯಂತ ನಿಯಮ ಉಲ್ಲಂಘನೆಗಳನ್ನು ತಡೆಗಟ್ಟಲು ಆಹಾರ ಸುರಕ್ಷತಾ ಅಧಿಕಾರಿಗಳ ನೇತೃತ್ವದಲ್ಲಿ ವಿಶೇಷ ತಪಾಸಣೆ ಮತ್ತು ಜಾರಿ ಕಾರ್ಯಾಚರಣೆಗಳನ್ನು ಕೈಗೊಳ್ಳಲಾಗುತ್ತಿದೆ. ಮಾರುಕಟ್ಟೆಯಲ್ಲಿ ನಿಷೇಧಿತ ಉತ್ಪನ್ನಗಳ ತಯಾರಿಕೆ, ಮಾರಾಟ ಅಥವಾ ವಿತರಣೆ ಕಂಡುಬAದರೆ ಕಾನೂನು ರೀತ್ಯಾ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ಎಚ್ಚರಿಸಿದೆ.
ಅಷ್ಟೇ ಅಲ್ಲದೇ, ಸಾರ್ವಜನಿಕರು ತಮ್ಮ ಆಸುಪಾಸಿನಲ್ಲಿ ಇಂತಹ ನಿಷೇಧಿತ ಉತ್ಪನ್ನಗಳ ಅಕ್ರಮ ಮಾರಾಟ ಅಥವಾ ಸಂಗ್ರಹಣೆ ಕಂಡುಬAದಲ್ಲಿ ತಕ್ಷಣವೇ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ. ಆರೋಗ್ಯಕರ ಹಾಗೂ ಸುಸ್ಥಿರ ಸಮಾಜದ ನಿರ್ಮಾಣಕ್ಕಾಗಿ ಸಾರ್ವಜನಿಕರು ಸರ್ಕಾರದ ಈ ಮಹತ್ತರ ಆಂದೋಲನಕ್ಕೆ ಪೂರ್ಣ ಸಹಕಾರ ನೀಡಬೇಕಾಗಿ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಪ್ರಕಟಣೆಯಲ್ಲಿ ಕೋರಿದೆ.




.
.
.
.
.
.
.
.
.
.
.
.
.
.
.
.
.
.
.
.
