Share this news

ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದಲ್ಲಿ ಹೊರದೇಶದಿಂದ ಹಣ ಪಡೆದು ಅಪಪ್ರಚಾರ ನಡೆಯುತ್ತಿದೆ. ದೇಶದ್ರೋಹಿಗಳು ಈ ಪ್ರಕರಣದಲ್ಲಿದ್ದಾರೆ. ಕಾಂಗ್ರೆಸ್‌ನಿಂದ ನ್ಯಾಯ ಸಿಗಲು ಸಾಧ್ಯವಿಲ್ಲ. ಹೀಗಾಗಿ ಈ ಪ್ರಕರಣವನ್ನು ಸಿಬಿಐ ಅಥವಾ ಎನ್‌ಐಎ ತನಿಖೆಗೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆಗ್ರಹಿಸಿದರು.

ಧರ್ಮಸ್ಥಳದಲ್ಲಿ ಸೋಮವಾರ ಬಿಜೆಪಿ ವತಿಯಿಂದ ಧರ್ಮಸ್ಥಳ ಚಲೋ, ನಮ್ಮ ನಡಿಗೆ ಧರ್ಮದೆಡೆಗೆ ಸಮಾವೇಶದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಧರ್ಮಸ್ಥಳ ಚಲೋ ಮಾಡುತ್ತೇವೆ ಎಂದಾಗ ಇದನ್ನು ರಾಜಕೀಯ ಅಂದರು. ಆದರೆ ಇಲ್ಲಿ ಪಕ್ಷದ ಧ್ವಜ ಇದೆಯಾ ಎಂದು ಗಮನಿಸಬೇಕು. ಇದು ಸ್ವಾಭಿಮಾನಿ ಹಿಂದೂ ಕಾರ್ಯಕರ್ತರ ಹೋರಾಟ. ಕಳೆದ ಎರಡೂವರೆ ವರ್ಷಗಳಿಂದ ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರಿಗೆ ಅಪಮಾನವಾಗುತ್ತಿದೆ. ಇದೀಗ ಧರ್ಮಸ್ಥಳ ಮಂಜುನಾಥ ಸ್ವಾಮಿಗೆ ಅಪಚಾರ ಮಾಡುತ್ತಿದ್ದಾರೆ ಎಂದು ಹೇಳಿದರು.

ಹಿಂದೆ ಸುಹಾಸ್ ಶೆಟ್ಟಿ ಹತ್ಯೆ ಆದಾಗ ಗೃಹ ಸಚಿವರು ಮಂಗಳೂರಿಗೆ ಬಂದಿದ್ದರೂ ಸಾಂತ್ವನ ಹೇಳಲಿಲ್ಲ. ಕಾಂಗ್ರೆಸ್ ಕೇವಲ ದುಷ್ಟರಿಗೆ ಶಕ್ತಿ ಕೊಡುವ ಪಕ್ಷವಾಗಿದೆ. ಕಳೆದ ಒಂದು ತಿಂಗಳಿನಿಂದ ತಾಳ್ಮೆಯಲ್ಲಿದ್ದೆವು. ಪ್ರಾಮಾಣಿಕತೆ ಇದೆ, ಅಪಪ್ರಚಾರ ತಡೆಯುತ್ತದೆ ಎಂದು ಎಸ್‌ಐಟಿಯನ್ನೂ ಸ್ವಾಗತಿಸಿದೆವು. ಆದರೆ ಪ್ರಾಥಮಿಕ ತನಿಖೆಯನ್ನೂ ಮಾಡದೆ ಉತ್ಖನನ ನಡೆಸಿದರು. ಸೌಜನ್ಯ ಪ್ರಕರಣವನ್ನು ಬೇಕಾದರೆ ಮರು ತನಿಖೆ ಮಾಡಲಿ. ಸೌಜನ್ಯ ಕುಟುಂಬಕ್ಕೆ ನ್ಯಾಯ ಸಿಗಲಿ. ಇದಕ್ಕಾಗಿ ಅಕ್ವಿಟಲ್ ಕಮಿಟಿ ಘೋಷಣೆ ಮಾಡಿ. ಬಿಜೆಪಿ ಸಂಪೂರ್ಣ ಬೆಂಬಲಿಸುತ್ತದೆ ಎಂದರು.

 

 

 

 

 

 

  

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

  

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *