
ಕಾರ್ಕಳ, ಏ.07: ರೋಟರಿ ಕ್ಲಬ್ ಕಾರ್ಕಳ ಇದರ ವತಿಯಿಂದ ವಿಶ್ವ ಆರೋಗ್ಯ ದಿನಾಚರಣೆ ಪ್ರಯುಕ್ತ ಕಾರ್ಕಳದ ಡಾ.ಟಿಎಂಎ ಪೈ ರೋಟರಿ ಆಸ್ಪತ್ರೆಯಲ್ಲಿ ಆರೋಗ್ಯ ಜಾಗೃತಿ ಶಿಕ್ಷಣ ಕಾರ್ಯಕ್ರಮ ಏ 7ರಂದು ನಡೆಯಿತು. ಈ ಕಾರ್ಯಕ್ರಮವನ್ನು ಮಕ್ಕಳ ತಜ್ಞರಾದ ಡಾ. ಆಶಾ ಪಿ ಹೆಗಡೆ ಅವರು ಉದ್ಘಾಟಿಸಿ ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಡಾ.ಟಿಎಂಎ ಪೈ ಆಸ್ಪತ್ರೆಯ ವೈದ್ಯರಾದ ಡಾ. ಸೂರಜ್ ರಾವ್ ಎಚ್ ಅವರು ಭಾಗವಹಿಸಿ, ಆರೋಗ್ಯದ ಮಹತ್ವ, ಜೀವನಶೈಲಿ ಬದಲಾವಣೆಗಳು ಹಾಗೂ ಸಮಕಾಲೀನ ಆರೋಗ್ಯ ಸಮಸ್ಯೆಗಳ ಕುರಿತು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಡಾ. ಭರತೇಶ ಆದಿರಾಜ್,ಜೆಸಿಐ ಕಾರ್ಕಳದ ಅಧ್ಯಕ್ಷರಾದ ಜೆಸಿ ಅವಿನಾಶ್ ಜಿ ಶೆಟ್ಟಿ ಉಪಸ್ಥಿತರಿದ್ದರು.
ರೋಟರಿ ಕ್ಲಬ್ ಕಾರ್ಕಳದ ಅಧ್ಯಕ್ಷರಾದ ಕೆ. ನವೀನ್ ಚಂದ್ರ ಶೆಟ್ಟಿ ಅವರು ಸ್ವಾಗತಿಸಿ ಪ್ರಸ್ತಾವನೆಗೈದರು. ರೋಟರಿ ಕ್ಲಬ್ ರಾಕ್ ಸಿಟಿಯ ಅಧ್ಯಕ್ಷರಾದ ಸುರೇಂದ್ರ ನಾಯಕ್ ಅವರು ವಂದಿಸಿದರು. ಟಿಎಂಎ ಪೈ ರೋಟರಿ ಆಸ್ಪತ್ರೆಯ ಎಎಂಓ ಅನುಷಾ ಪ್ರಭು ಕಾರ್ಯಕ್ರಮ ನಿರೂಪಿಸಿದರು.
















.
.
.
.
.
.
.
.
.
.
