Share this news

ಕಾರ್ಕಳ: ಕಾರ್ಕಳ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ (ರಿ), ಕಾರ್ಕಳ ತಾಲೂಕು ಇದರ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಸಪ್ತಸ್ವರ ವೇದಿಕೆಯಲ್ಲಿ “ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ” ಸೆ.12 ರಂದು ನಡೆಯಿತು.

ಉದ್ಘಾಟಕರಾಗಿ ಆಗಮಿಸಿದ ತಾಲೂಕು ಜನಜಾಗೃತಿ ವೇದಿಕೆಯ ಸದಸ್ಯರಾದ ಸಂತೋಷ್ ಶೆಟ್ಟಿ ಮಾತನಾಡಿ ‘ಸಮಾಜದ ಪ್ರಗತಿ ಆರೋಗ್ಯದ ಹಾದಿಯಲ್ಲೇ ಅಡಗಿದೆ. ಆರೋಗ್ಯದ ಅರಿವು ಬೆಳೆಯಲು ಜಾಗೃತಿ ಅತ್ಯವಶ್ಯಕ ‘ ಎಂದು ಕಿವಿಮಾತುಗಳನ್ನು ಹೇಳಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಪ್ರಾದೇಶಿಕ ಕಛೇರಿ, ಉಡುಪಿಯ ಯೋಜನಾಧಿಕಾರಿಗಳಾದ ಗಣೇಶ್ ಆಚಾರ್ಯ, ಆರೋಗ್ಯದ ಅರಿವು ಬೆಳಗಿದಾಗ ಮಾತ್ರ ಸಮಾಜ ಶ್ರೇಯೋಭಿವೃದ್ಧಿಯ ಹಾದಿ ಹಿಡಿಯುತ್ತದೆ ಎಂದರು. ಹಾಗೂ ಪ್ರತಿಜ್ಞಾವಿಧಿ ಕಾರ್ಯಕ್ರಮವನ್ನು ನೆರವೇರಿಸಿಕೊಟ್ಟರು.

ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕರಾದ ಡಾ. ಬಿ ಗಣನಾಥ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಾಗೃತಿಯ ಬೆಳಕು ಮೂಡಿದಾಗಲೇ ಸಮಾಜ ಆರೋಗ್ಯ, ಅರಿವು ಮತ್ತು ಪ್ರಗತಿಯನ್ನು ಕಾಣುತ್ತದೆ ‘ ಎಂದರು.

ಈ ಸಂದರ್ಭದಲ್ಲಿ ತಾಲೂಕು ಜನಜಾಗೃತಿ ವೇದಿಕೆ ಸದಸ್ಯರಾದ ಕರುಣಾಕರ ಕಡಂಬ, ಹಿರ್ಗಾನ ‘ಎ’ ಒಕ್ಕೂಟ ಅಧ್ಯಕ್ಷರಾದ ಸುಭಾಷ್ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಎಲ್ಲಾ ಅತಿಥಿಗಳಿಗೆ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಸ್ಮರಣಿಕೆಗಳನ್ನು ನೀಡಿ ಗೌರವಿಸಲಾಯಿತು.
ಬೋಧಕ-ಬೋಧಕೇತರ ವರ್ಗದವರು, ವಿದ್ಯಾರ್ಥಿ-ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಕನ್ನಡ ಉಪನ್ಯಾಸಕಿ ಪ್ರಿಯಾಂಕ ತೀರ್ಥರಾಮ ಕಾರ್ಯಕ್ರಮ ನಿರೂಪಿಸಿ,ತಾಲೂಕು ಜನಜಾಗೃತಿ ವೇದಿಕೆ ಸದಸ್ಯರಾದ ವಾಸು ಶೆಟ್ಟಿ ವಂದಿಸಿದರು.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *