ಹೆಬ್ರಿ: ಮರಕ್ಕೆ ಹತ್ತಿ ಸೊಪ್ಪು ಕಡಿಯುತ್ತಿದ್ದ ವೇಳೆ ಹೃದಯಾಘಾತವಾಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾಮದ ನೆಲ್ಲಿಕಟ್ಟೆ ಎಂಬಲ್ಲಿ ಮಂಗಳವಾರ ನಡೆದಿದೆ.
ಗೋಪಾಲ (32ವ) ಮೃತಪಟ್ಟವರು. ಅವರು ಕೂಲಿ ಕೆಲಸವನ್ನು ಮಾಡಿಕೊಂಡಿದ್ದು, ವಿಪರೀತ ಮದ್ಯಪಾನ ಮಾಡುವ ಚಟ ಹೊಂದಿದ್ದರು. ಮಂಗಳವಾರ ಬೆಳಿಗ್ಗೆ ನೆಲ್ಲಿಕಟ್ಟೆಯ ರಮೇಶ ಎಂಬವರ ಮನೆಗೆ ಕೆಲಸಕ್ಕೆಂದು ಹೋಗಿದ್ದರು. ಅಲ್ಲಿ ಅಡಿಕೆ ಮರಕ್ಕೆ ಸೊಪ್ಪು ಹಾಕುವ ಸಲುವಾಗಿ ಮರಕ್ಕೆ ಹತ್ತಿ ಸೊಪ್ಪು ಕಡಿಯುತ್ತಿದ್ದ ವೇಳೆ ಗೋಪಾಲ ಅವರು ಆಕಸ್ಮಿಕವಾಗಿ ಮರದಿಂದ ಕೆಳಕ್ಕೆ ಬಿದ್ದಿದ್ದರು. ಬಳಿಕ ಅವರನ್ನು ಚಿಕಿತ್ಸೆಗಾಗಿ ಉಡುಪಿ ಅಜ್ಜರಕಾಡು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಅವರು ಮೃತಪಟ್ಟಿದ್ದರು.
ಮರಕ್ಕೆ ಹತ್ತಿ ಸೊಪ್ಪು ಕಡಿಯುತ್ತಿದ್ದ ವೇಳೆ ಅವರಿಗೆ ಹೃದಯಾಘಾತವಾಗಿ ಕಾರು ಜಾರಿ ಕೆಳಕ್ಕೆ ಬಿದ್ದು ಸಾವನ್ನಪ್ಪಿರಬಹುದೆಂದು ಶಂಕಿಸಲಾಗಿದ್ದು, ಈ ಕುರಿತು ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.