
ನವದೆಹಲಿ,ಮಾ.7: ಗೃಹ ಬಳಕೆಯ 14.2 ಕೆಜಿ ಎಲ್ಪಿಜಿ ಸಿಲಿಂಡರ್ಗಳ ಬೆಲೆ ಇಂದಿನಿಂದ ದೇಶಾದ್ಯಂತ 60 ರೂಪಾಯಿ ಹೆಚ್ಚಳವಾಗಿದೆ ಎಂದು ಮೂಲಗಳು ತಿಳಿಸಿವೆ.ಅದೇ ರೀತಿ, 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯೂ 115 ರೂಪಾಯಿ ಹೆಚ್ಚಿಸಲಾಗಿದೆ, ಇದರಿಂದ ಹೋಟೆಲ್, ರೆಸ್ಟೋರೆಂಟ್ಗಳು ಮತ್ತು ಸಣ್ಣ ವಾಣಿಜ್ಯ ಸಂಸ್ಥೆಗಳ ಮೇಲೆ ಪರಿಣಾಮ ಬೀಳಲಿದೆ.
ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ ಜಾಗತಿಕ ಇಂಧನ ಮಾರುಕಟ್ಟೆಯ ಮೇಲೂ ಪರಿಣಾಮ ಬೀರುವ ಆತಂಕ ವ್ಯಕ್ತವಾಗಿದೆ. ಕೇಂದ್ರ ಸರ್ಕಾರವು ಸಾರ್ವಜನಿಕ ಹಾಗೂ ಖಾಸಗಿ ವಲಯದ ಎಲ್ಪಿಜಿ ಸಂಸ್ಕರಣಾಗಾರಗಳಿಗೆ ಉತ್ಪಾದನೆಯನ್ನು ಹೆಚ್ಚಿಸುವಂತೆ ಸೂಚಿಸಿತ್ತು. ಈ ಮೂಲಕ ದೇಶದಲ್ಲಿ ಅನಿಲ ಪೂರೈಕೆ ವ್ಯತ್ಯಯವಾಗದಂತೆ ಕ್ರಮ ಕೈಗೊಳ್ಳಲಾಗಿದೆ.ಮಧ್ಯಪ್ರಾಚ್ಯದಲ್ಲಿ ಅಸ್ಥಿರತೆ ಇದ್ದರೂ ಭಾರತದಲ್ಲಿ ಇಂಧನ ಕೊರತೆ ಉಂಟಾಗುವುದಿಲ್ಲ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ. ದೇಶದಲ್ಲಿ ಕಚ್ಚಾ ತೈಲ, ಪೆಟ್ರೋಲ್, ಡೀಸೆಲ್ ಮತ್ತು ಎಲ್ಪಿಜಿ ಸೇರಿದಂತೆ ಸಾಕಷ್ಟು ಇಂಧನ ದಾಸ್ತಾನು ಲಭ್ಯವಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಇಸ್ರೇಲ್-ಇರಾನ್ ಯುದ್ಧದ ಹಿನ್ನೆಲೆಯಲ್ಲಿ ಇರಾನ್ ಪ್ರಮುಖ ಸಮುದ್ರ ಮಾರ್ಗವಾದ ಹಾರ್ಮುಜ್ ಜಲಸಂಧಿಯ ಮೂಲಕ ಹಡಗು ಸಾಗಾಟಕ್ಕೆ ನಿರ್ಬಂಧ ಹೇರಿರುವುದರಿಂದ ಕಚ್ಚಾ ತೈಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಇಂಧನ ಬೆಲೆ ಏರಿಕೆಯ ಆತಂಕ ಹೆಚ್ಚಾಗಿದೆ.


.
.
.
.
.
.
.
.
.
.
