ಹೆಬ್ರಿ: ಕಳೆದ 2 ವರ್ಷಗಳಿಂದ ಅನಾರೋಗ್ಯ ಹಾಗೂ ಆರ್ಥಿಕ ಸಮಸ್ಯೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೆಬಿ ಪೊಲೀಸ್ ಠಾಣಾ ವ್ಯಾಪ್ತಿಯ ಬ್ರಹ್ಮಾವರ ತಾಲೂಕಿನ ನಡೂರು ಗ್ರಾಮದಲ್ಲಿ ಶನಿವಾರ ನಡೆದಿದೆ.
ಶ್ರೀಧರ (41ವ) ಆತ್ಮಹತ್ಯೆ ಮಾಡಿಕೊಂಡವರು.ಅನಾರೋಗ್ಯ ಪೀಡಿತರಾಗಿದ್ದ ಅವರಿಗೆ ಕೂಲಿ ಕೆಲಸಕ್ಕೆ ಹೋಗಲು ಆಗದ ಕಾರಣ ಹಣದ ಸಮಸ್ಯೆಯೂ ಇತ್ತು. ಇದರಿಂದ ಮನನೊಂದಿದ್ದ ಅವರು ಶನಿವಾರ (ಆ.10) ತಾನು ವಾಸವಿದ್ದ ಬಾಡಿಗೆ ಮನೆಯಲ್ಲಿ ನೇಣು ಬಿಗಿದು ಅತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಕುರಿತು ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.















`
