ಹೆಬ್ರಿ: ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯದಲ್ಲಿ ಶಿವಾಜಿ ಮಹಾರಾಜರ ಪಟ್ಟಾಭಿಷೇಕ ದಿನಾಚರಣೆ ಬುಧವಾರ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಅಮೃತ ಭಾರತಿ ವಿದ್ಯಾಲಯದ ಅಧ್ಯಕ್ಷರಾದ ಶೈಲೇಶ್ ಕಿಣಿಯವರು ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ನಾವು ಭಾರತೀಯ ಸಂಸ್ಕೃತಿ ಉಳಿಸಿಕೊಳ್ಳಲು, ಪಠ್ಯದಲ್ಲಿ ದೇಶಕ್ಕಾಗಿ ಹೋರಾಟ ಮಾಡಿದವರ ವಿಚಾರವನ್ನು ಅಧ್ಯಯನ ಮಾಡಬೇಕು. ಅದರೊಂದಿಗೆ ಸಾತ್ವಿಕ ಹೋರಾಟವನ್ನು ಮಾಡಿ ಒಗ್ಗಟ್ಟಾಗಿ ಇರಬೇಕು ಎಂದು ತಿಳಿಸಿದರು.
ಸಂಸ್ಥೆಯ ಆಂಗ್ಲ ಭಾಷಾ ಶಿಕ್ಷಕಿ ಸಾವಿತ್ರಿ ಕಿಣಿ ಮಾತನಾಡಿ ಭಾರತವನ್ನು ಒಗ್ಗೂಡಿಸುವ ಕೆಲಸ ಛತ್ರಪತಿ ಶಿವಾಜಿ ಮಹಾರಾಜರ ಮೂಲಕ ಆಗಿದೆ. ಶಿವಾಜಿಯು ಹಿಂದೂ ಸಾಮ್ರಾಜ್ಯವನ್ನು ಪುನಃ ಪ್ರತಿಷ್ಠಾಪಿಸಿದ ಮಹಾನ್ ಶಕ್ತಿ ಆಗಿದ್ದಾರೆ. ಭಾರತವನ್ನು ಅಲ್ಪ ಸಮಯದಲ್ಲಿ ಸಂಸ್ಕೃತಿ ಮತ್ತು ಪರಂಪರೆಯನ್ನು ತನ್ನ ಜೀವಿತಾವಧಿಯಲ್ಲಿ ಉಳಿಸಿದ ಹೋರಾಟಗಾರ ಆಗಿದ್ದರು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಮುಖ್ಯಸ್ಥೆ ಅಪರ್ಣಾ ಆಚಾರ್ ಹಾಗೂ ವಿದ್ಯಾರ್ಥಿಗಳು, ಬೋಧಕ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.