
ಹೆಬ್ರಿ,ಜ.16 :ಕೇಂದ್ರ ಸರ್ಕಾರ ಮತ್ತು ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯ ಜನಕಪುರಿ, ನವದೆಹಲಿ ಇವರು ಸಂಸ್ಕೃತ ಭಾಷಾ ಅಧ್ಯಯನ ಮಾಡುವ ವಿದ್ಯಾರ್ಥಿಗಳಿಗೆ ಪ್ರತಿವರ್ಷವೂ ನೀಡುವ ಕಲಿಕಾ ಪ್ರೋತ್ಸಾಹ 2025ನೇ ಸಾಲಿನ ವಿದ್ಯಾರ್ಥಿ ವೇತನಕ್ಕೆ ಹೆಬ್ರಿ ಪಿ ಆರ್ ಎನ್ ಅಮೃತ ಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಆರು ವಿದ್ಯಾರ್ಥಿಗಳು ಭಾಜನರಾಗಿದ್ದಾರೆ.
ಪ್ರಸ್ತುತ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಾದ ಲಾವಣ್ಯ ಹೆಚ್ ವಿ, ಶ್ರಾವ್ಯ ಹೆಗ್ಡೆ, ಸೃಜನ್ ಭಟ್, ಶಾನ್ವಿ ಎಸ್ ಕುಂದರ್, ಪ್ರಣಮ್ಯ ಕೆ, ಹಾಗೂ ಅಮೃತ ಭಾರತಿ ಪದವಿ ಪೂರ್ವ ಕಾಲೇಜಿನ ಪ್ರವೀಣ್ ಶೆಣೈ ಇವರು ತಲಾ 5,000/ರೂಪಾಯಿಯನ್ನು ಪಡೆದುಕೊಂಡಿದ್ದಾರೆ.
ವಿದ್ಯಾರ್ಥಿಗಳನ್ನು ಮತ್ತು ವಿದ್ಯಾರ್ಥಿ ವೇತನಕ್ಕೆ ಸಹಕರಿಸಿದ ಸಂಸ್ಥೆಯ ಸಂಸ್ಕೃತ ಶಿಕ್ಷಕ ವಿದ್ವಾನ್ ವೇದವ್ಯಾಸ ತಂತ್ರಿ ಮಡಾಮಕ್ಕಿ ಇವರನ್ನು ಸಂಸ್ಥೆಯ ಅಧ್ಯಕ್ಷ ಶೈಲೇಶ್ ಕಿಣಿ ಮತ್ತು ಸಂಸ್ಥೆಯ ಮುಖ್ಯಶಿಕ್ಷಕಿ ಅಪರ್ಣಾ ಆಚಾರ್ ಅಭಿನಂದಿಸಿದ್ದಾರೆ.

.
.
.
.
