Share this news

ಹೆಬ್ರಿ :ಪಿ ಆರ್ ಎನ್ ಅಮೃತಭಾರತಿ ಆಂಗ್ಲ ಮಾಧ್ಯಮ ವಿದ್ಯಾಲಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು.

ನಿವೃತ್ತ ಶಿಕ್ಷಕ ಮುದ್ರಾಡಿ ಗಣಪತಿ ಪೈ ಮಾತನಾಡಿ ದೈಹಿಕ, ಮಾನಸಿಕ ಆರೋಗ್ಯಕ್ಕೆ ಯೋಗಾಭ್ಯಾಸ ಅನಿವಾರ್ಯವಾಗಿದೆ . ” ಯೋಗಾತ್ ರೋಗ ನಿವಾರಣಮ್ ” ಎಂಬಂತೆ ನಿತ್ಯ ಯೋಗಾಸನವನ್ನು ಮಾಡುವ ವ್ಯಕ್ತಿಗೆ ಯಾವುದೇ ಕಾರಣಕ್ಕೂ ರೋಗ ಬರಲು ಸಾಧ್ಯವಿಲ್ಲ ಎಂದು ಯೋಗದ ಮಹತ್ವವನ್ನು ತಿಳಿಸಿ , ವಿವಿಧ ಆಸನಗಳನ್ನು ಪ್ರಾತ್ಯಕ್ಷಿಕೆ ಮೂಲಕ ತಿಳಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಮುಖ್ಯಸ್ಥೆ ಅಪರ್ಣಾ ಆಚಾರ್, ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ನಿಶಾನ್ ಶೆಟ್ಟಿ, ಹಾಗೂ ಗುರುವೃಂದದವರು ಉಪಸ್ಥಿತರಿದ್ದು , ದೈಹಿಕ ಶಿಕ್ಷಣ ಶಿಕ್ಷಕ ಪ್ರವೀಣ್ ಹೆಗ್ಡೆ ಸ್ವಾಗತಿಸಿ, ವೇದವ್ಯಾಸ ತಂತ್ರಿ ಮಡಾಮಕ್ಕಿ ವಂದಿಸಿದರು.

 

 

 

 

 

 

Leave a Reply

Your email address will not be published. Required fields are marked *