
ಹೆಬ್ರಿ,ಡಿ.19: ಶಾಲಾ ಶಿಕ್ಷಣ ಇಲಾಖೆ ಮತ್ತು ಸಾಕ್ಷರತಾ ಇಲಾಖೆ, ಉಪನಿರ್ದೇಶಕರ ಕಚೇರಿ ರಜತಾದ್ರಿ ಮಣಿಪಾಲ ಉಡುಪಿ ಜಿಲ್ಲೆ ಇವರು 2025-26ನೇ ಸಾಲಿನ ಪ್ರೌಢಶಾಲಾ ಶಿಕ್ಷಕರಿಗೆ ಉಡುಪಿಯ ಸೈಂಟ್ ಸಿಸಿಲಿ ಪ್ರೌಢಶಾಲೆಯಲ್ಲಿ ನಡೆಸಿದ ಜಿಲ್ಲಾ ಮಟ್ಟದ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆಯಲ್ಲಿ ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಗಣಿತ ಶಿಕ್ಷಕಿ ಪಂಚಮಿ ವಿಜ್ಞಾನ ರಸಪ್ರಶ್ನೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.
ಇವರನ್ನು ಶಾಲಾ ಮುಖ್ಯ ಶಿಕ್ಷಕಿ ಅಪರ್ಣಾ ಆಚಾರ್ ಹಾಗೂ ಆಡಳಿತ ಮಂಡಳಿ ಅಭಿನಂದಿಸಿದ್ದಾರೆ.
.
.
