
ಹೆಬ್ರಿ, ಫೆ.10: ಸ್ಕೂಟರ್ ಬುಲೆಟ್ ಬೈಕ್ ನಡುವೆ ಡಿಕ್ಕಿಯಾಗಿ ಸ್ಕೂಟರ್ ಸವಾರ ಹಾಗೂ ಸಹಸವಾರ ಗಾಯಗೊಂಡ ಘಟನೆ ಹೆಬ್ರಿ ಸಮೀಪದ ಹಾಲೆಕೋಡ್ಲು ಎಂಬಲ್ಲಿ ಸೋಮವಾರ ಸಂಭವಿಸಿದೆ.
ಸ್ಕೂಟರ್ ಸವಾರ ಹೆಬ್ರಿ ತಾಲೂಕಿನ ಮಡಾಮಕ್ಕಿ ಗ್ರಾಮದ ಹಡೊಲ್ ಬೈಲ್ ನಿವಾಸಿ ಉಮೇಶ್ ಶೆಟ್ಟಿ ಹಾಗೂ ಸಂತೋಷ್ ಶೆಟ್ಟಿ ಗಾಯಗೊಂಡವರು.
ಸ್ಕೂಟರ್ ಸವಾರ ಉಮೇಶ್ ಶೆಟ್ಟಿ ತನ್ನ ಬಾವ ಸಂತೋಷ್ ಶೆಟ್ಟಿಯವರ ಜೊತೆ ಸ್ಕೂಟರ್ ನಲ್ಲಿ ಸೋಮವಾರ ಬೆಳಗ್ಗೆ 11.15 ರ ಸುಮಾರಿಗೆ ಮಾಂಡಿ ಮೂರುಕೈ ಮಾರ್ಗವಾಗಿ ಹೆಬ್ರಿ ಕಡೆಗೆ ಹೋಗುತ್ತಿದ್ದಾಗ ಹೆಬ್ರಿ ಕಡೆಯಿಂದ ವೇಗವಾಗಿ ಬರುತ್ತಿದ್ದ ಬುಲೆಟ್ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಅಪಘಾತದ ಬಳಿಕ ಬುಲೆಟ್ ಬೈಕ್ ಸವಾರ ಸ್ಥಳದಿಂದ ಪರಾರಿಯಾಗಿದ್ದಾನೆ.
ಈ ಕುರಿತು ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

.
.
.
.
.
.
.
.
.
.
