
ಹೆಬ್ರಿ,ಜು. 04: ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮಟ್ಕಾ ಜುಗಾರಿ ಆಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿರುವ ಪೊಲೀಸರು ಆಟಕ್ಕೆ ಬಳಸಿದ್ದ ಪರಿಕರಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.
ಹೆಬ್ರಿಯ ವಿಜಯಲಕ್ಷ್ಮಿ ಬಾರ್ ಎಂಡ್ ರೆಸ್ಟೋರೆಂಟ್ ನ ಎದುರುಗಡೆ ಜು.2 ರಂದು ಸಾರ್ವಜನಿಕ ಸ್ಥಳದಲ್ಲಿ ವ್ಯಕ್ತಿಯೊಬ್ಬ ಜುಗಾರಿ ಆಡುತ್ತಿದ್ದಾನೆ ಎನ್ನುವ ಖಚಿತ ಮಾಹಿತಿ ದೊರೆತ ಪೊಲೀಸರು ದಾಳಿ ನಡೆಸಿದ್ದಾರೆ. ಉಡುಪಿ ಪುತ್ತೂರಿನ ಚೇತನ(24) ಎಂಬಾತನ್ನು ಬಂಧಿಸಿರುವ ಪೊಲೀಸರು ಆತನಿಂದ ಆಟಕ್ಕೆ ಬಳಸಿದ್ದ ನಗದು ಸಹಿತ ಇನ್ನಿತರ ಪರಿಕರಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.



.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
.
