
ಹೆಬ್ರಿ,ಮೇ23: ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಬ್ರಹ್ಮಾವರ ತಾಲೂಕಿನ ನಾಲ್ಕೂರು ಗ್ರಾಮದ ಚಂದಾಲ್ ಕಟ್ಟೆ ಎಂಬಲ್ಲಿ ಗೇರು ಪ್ಲಾಂಟೇಶನ್ನಲ್ಲಿ ಅಕ್ರಮ ಕೋಳಿ ಅಂಕ ನಡೆಸುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಮೇ.20 ರಂದು ಹೆಬ್ರಿ ಠಾಣಾ ಪಿಎಸ್ಐ ರಬಿ ಬಿ.ಕೆ ಅವರು ರೌಂಡ್ಸ್ ನಲ್ಲಿದ್ದ ವೇಳೆ ನಾಲ್ಕೂರು ಬೀಟ್ ಸಿಬ್ಬಂದಿ ಕರೆ ಮಾಡಿ ಅಕ್ರಮ ಕೋಳಿ ಅಂಕ ನಡೆಸುತ್ತಿರುವ ಬಗ್ಗೆ ಮಾಹಿತಿ ನೀಡಿದ್ದರು. ತಮಗೆ ಬಂದ ಮಾಹಿತಿಯಂತೆ ಪೊಲೀಸರ ತಂಡ ದಾಳಿ ನಡೆಸಿ ಸ್ಥಳದಲ್ಲಿದ್ದ ಶೇಖರ ಪೂಜಾರಿ ಹಾಗೂ ಬಸವ ಕುಲಾಲ್ ಎಂಬವರನ್ನು ವಶಕ್ಕೆ ಪಡೆದಿದ್ದು, ಇನ್ನುಳಿದ ವ್ಯಕ್ತಿಗಳು ಓಡಿ ಪರಾರಿಯಾಗಿದ್ದಾರೆ.
ಪೊಲೀಸರು ಜೂಜಾಟಕ್ಕೆ ಬಳಸಿದ್ದ ರೂ.2800 ಬೆಲೆಯ ಕೋಳಿ, ರೂ.1000 ನಗದು ಸಹಿತ ಇನ್ನಿತರ ಪರಿಕರಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.



.
.
.
.
.
.
.
.
.
.
.
.
.
.
.
.
.
.
.
.
