ಹೆಬ್ರಿ: ಹೆಬ್ರಿಯ ತಮ್ಮ ಮನೆಯಿಂದ ಕೆಲಸಕ್ಕೆಂದು ಹೋದ ವ್ಯಕ್ತಿಯೊಬ್ಬರು ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ. ವಸಂತಿ ಎಂಬವರ ಪತಿ ಪ್ರಭಾಕರ(46ವರ್ಷ) ನಾಪತ್ತೆಯಾದವರು.
ಪ್ರಭಾಕರ ಅವರು ಈ ಹಿಂದೆ ಸುಮಾರು 5-6 ಬಾರಿ ಮನೆಯಿಂದ ಕೆಲಸಕ್ಕೆಂದು ಹೋದವರು ಸುಮಾರು 2-3 ತಿಂಗಳವರೆಗೆ ಇದ್ದು ನಂತರ ಮನೆಗೆ ವಾಪಾಸಾಗುತ್ತಿದ್ದರು. ಆದರೆ 2023 ರ ಡಿಸೆಂಬರ್‌ನಲ್ಲಿ ಮನೆಯಿಂದ ಹೋದವರು ಈವರೆಗೂ ಮನೆಗೆ ಬಾರದೇ ನಾಪತ್ತೆಯಾಗಿದ್ದಾರೆಂದು ಅವರ ಪತ್ನಿ ದೂರು ನೀಡಿದ್ದು ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ