
ಹೆಬ್ರಿ,ಜೂ.29: ಹೆಬ್ರಿ ತಾಲೂಕಿನ ಶಿವಪುರದ ಮಹಿಳೆಯೊಬ್ಬರು ಇಬ್ಬರು ಮಕ್ಕಳು ಮತ್ತು ಸೊಸೆಯೊಂದಿಗೆ ಅರ್ಜಿ ವಿಚಾರಣೆ ಸಲುವಾಗಿ ಪೊಲೀಸ್ ಠಾಣೆಗೆ ಬಂದಿದ್ದ ವೇಳೆ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮೃತಪಟ್ಟಿದ್ದಾರೆ.
ಶಿವಪುರದ ಸುಶೀಲ (78) ಎಂಬವರು ಜೂ.28 ರಂದು ಅರ್ಜಿ ವಿಚಾರಣೆ ಸಲುವಾಗಿ ಹೆಬ್ರಿ ಪೊಲೀಸ್ ಠಾಣೆಗೆ ಬಂದಿದ್ದ ವೇಳೆ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದು, ಅವರನ್ನು ಹೆಬ್ರಿ ಹೆಲ್ತ್ ಕೇರ್ ಆಸ್ಪತ್ರೆಗೆ ಕರೆದೊಯ್ದು, ಮಣಿಪಾಲ ಕೆಎಂ ಸಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆಗೆ ಮೃತಪಟ್ಟಿದ್ದರು. ಸುಶೀಲಾ ಅವರು ಲಕ್ಷಿö್ಮÃ ಮತ್ತು ಪ್ರತಿಮಾ ಅವರ ಕಿರುಕುಳದಿಂದ ಮೃತಪಟ್ಟಿದ್ದಾರೆಂದು ಆರೋಪಿಸಿ ರಮೇಶ್ ನಾಯ್ಕ್ ಎಂಬವರು ದೂರು ನೀಡಿದ್ದು, ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



.
.
.
.
.
.
.
.
.
.
.
.
.
.
.
.
.
.
.
.
