
ಕಾರ್ಕಳ,ಡಿ.20: ತಾಲೂಕಿನ ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯ ಹೆರ್ಮುಂಡೆ ಎಂಬಲ್ಲಿ ಮದ್ಯಪಾನಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಹೆರ್ಮುಂಡೆ ಕುಡ್ಜೆ ಬಳಿ ನಿವಾಸಿ ಸುಬ್ರಾಯ ನಾಯಕ್ (78) ಆತ್ಮಹತ್ಯೆ ಮಾಡಿಕೊಂಡವರು.
ಅವರಿಗೆ ಅತಿಯಾಗಿ ಮದ್ಯಪಾನ ಮಾಡುವ ಚಟವಿದ್ದು, ಪತ್ನಿಯ ಮರಣಾನಂತರ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. ಈ ಬಗ್ಗೆ ಕೆ.ಎಂ.ಸಿ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅತಿಯಾದ ಮದ್ಯಪಾನ ಹಾಗೂ ಮಾನಸಿಕ ಖಿನ್ನತೆಯಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಡಿ. 18 ರಂದು ರಾತ್ರಿ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಕುರಿತು ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
.
.
