ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ ಎಇ, ಜೆಇ ಹುದ್ದೆಗಳ ಆಯ್ಕೆ ಪಟ್ಟಿಯನ್ನು ಹೈಕೋರ್ಟ್ ರದ್ದುಗೊಳಿಸಿದೆ. ಈ ಮೂಲಕ 2024ರ ಮೇ 8ರಂದು ಪ್ರಕಟಿಸಿದ್ದ ಆಯ್ಕೆ ಪಟ್ಟಿಯನ್ನು ರದ್ದುಗೊಳಿಸಿ, ಮರುಪರೀಕ್ಷೆಗೆ ಹೈಕೋರ್ಟ್ ಆದೇಶಿಸಿದೆ.
ನೆಗೆಟಿವ್ ಅಂಕ ಪದ್ದತಿಯನ್ನು ಪ್ರಶ್ನಿಸಿ ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ ಅಂಜಾರಿಯಾ, ನ್ಯಾಯಮೂರ್ತಿ ಕೆ.ವಿ ಅರವಿಂದ್ ಅವರನ್ನೊಳಗೊಂಡ ಪೀಠವು ವಿಚಾರಣೆ ನಡೆಸಿ ಆದೇಶ ಹೊರಡಿಸಿದೆ.
ಫೆಬ್ರವರಿ 18, 2024ರಂದು ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳಿಗೆ ಮರುಪರೀಕ್ಷೆ ನಡೆಸುವಂತೆ ಕೆಪಿಸಿಎಲ್, ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ. ಅಲ್ಲದೇ ನೆಗೆಟಿವ್ ಮಾರ್ಕಿಂಗ್ ಕುರಿತು ಅಭ್ಯರ್ಥಿಗಳಿಗೆ ಬಗ್ಗೆ ಪೂರ್ವ ಮಾಹಿತಿ ನೀಡಲು ಸೂಚಿಸಿದೆ.