

ಬೆಂಗಳೂರು,ನ.19: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆ ವೇಳೆ ಫಾರಂ 7 ಅರ್ಜಿಗಳನ್ನು ದುರ್ಬಳಕೆ ಮಾಡಿಕೊಂಡು ಮುಸ್ಲಿಂ ಮತದಾರರ ಹೆಸರು ಅಳಿಸಲು ಯತ್ನಿಸಿದ ಆರೋಪಕ್ಕೆ ಸಂಬAಧಿಸಿದAತೆ ಬಿಜೆಪಿಯ 10 ಮಂದಿ ಬೂತ್ ಮಟ್ಟದ ಏಜೆಂಟ್ ಗಳ ವಿರುದ್ಧದ ಪ್ರತ್ಯೇಕ ಮೂರು ಪ್ರಕರಣಗಳ ತನಿಖೆಗೆ ಹೈಕೋರ್ಟ್ ತಡೆ ನೀಡಿದೆ. ಇತ್ತೀಚೆಗೆ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಸಂದರ್ಭದಲ್ಲಿ ಮುಸ್ಲಿಂ ಸಮುದಾಯದ ಮತದಾರರನ್ನು ಗುರಿಯಾಗಿಸಿಕೊಂಡು ಫಾರ್ಮ್-7 ಅರ್ಜಿಗಳನ್ನು ಸಲ್ಲಿಸಲಾಗಿದೆ ಎಂಬ ಆರೋಪ ಕೇಳಿಬಂದಿತ್ತು.
ನ್ಯಾಯಮೂರ್ತಿ ಅನಂತ್ ರಾಮನಾಥ್ ಹೆಗ್ಡೆ ಅವರಿದ್ದ ಪೀಠ ಈ ಆದೇಶ ನೀಡಿದೆ. ಇದೇ ಪ್ರಕರಣದಲ್ಲಿ ಬಿಜೆಪಿ ಬೂತ್ ಮಟ್ಟದ ಏಜೆಂಟರಾದ ದೀಪಕ್ ಸಿಂಗ್ ಆರ್. ಮತ್ತು ಜಿ.ಎಸ್. ವಸಂತಲಕ್ಷ್ಮಿ ವಿರುದ್ಧ ದಾಖಲಾಗಿದ್ದ ಎಫ್ಐಆರ್ಗಳಿಗೆ ಅಕ್ಟೋಬರ್ 9ರಂದು ನೀಡಿದ್ದ ತಡೆಯಾಜ್ಞೆಯನ್ನೂ ನ್ಯಾಯಾಲಯ ಮುಂದುವರಿಸಿದೆ. ಇದೇ ವೇಳೆ, ಫಾರಂ 7 ಅರ್ಜಿಗಳಿಗೆ ಸಂಬAಧಿಸಿದAತೆ ಕೈಗೊಂಡ ನಿರ್ಧಾರಗಳ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಭಾರತೀಯ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನಿರ್ದೇಶಿಸಿದೆ. ಮತದಾರರ ನೋಂದಣಿ ನಿಯಮಗಳು- 1960ರಡಿ ಅರ್ಜಿಗಳ ಸತ್ಯಾಸತ್ಯತೆ ಕುರಿತು ನಡೆಯಬೇಕಿರುವ ಶಾಸನಬದ್ಧ ವಿಚಾರಣೆ ಮೊದಲು ಪೂರ್ಣಗೊಳ್ಳಬೇಕು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
ಮತದಾರರ ಪಟ್ಟಿಯಿಂದ ಅರ್ಹ ಮತದಾರರ ಹೆಸರುಗಳನ್ನು ತೆಗೆದು ಹಾಕುವ ಉದ್ದೇಶದಿಂದ ತಪ್ಪು ಮಾಹಿತಿ ನೀಡಿ ದೊಡ್ಡ ಪ್ರಮಾಣದಲ್ಲಿ ಫಾರಂ 7 ಅರ್ಜಿಗಳನ್ನು ಸಲ್ಲಿಸಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ನ ಬೂತ್ ಏಜೆಂಟ್ ಗಳು ದೂರು ನೀಡಿದ್ದಾರೆ. ಕೆಲವು ದೂರುಗಳಲ್ಲಿ ನಿರ್ದಿಷ್ಟವಾಗಿ ಮುಸ್ಲಿಂ ಸಮುದಾಯದ ಮತದಾರರನ್ನು ಗುರಿಯಾಗಿಸಲಾಗಿದೆ ಎಂದು ಆರೋಪಿಸಲಾಗಿದೆ.ತಮ್ಮ ವಿರುದ್ಧದ ಪ್ರಕರಣಗಳನ್ನು ಪ್ರಶ್ನಿಸಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದ ಬಿಜೆಪಿ ಏಜೆಂಟರು, ತಾವು ಯಾವುದೇ ತಪ್ಪು ಮಾಡಿಲ್ಲ ಎಂದು ವಾದಿಸಿದ್ದರು. ಮತದಾರರ ಹೆಸರು ಅಳಿಸುವಂತೆ ತಾವು ಅರ್ಜಿ ಸಲ್ಲಿಸಿದ್ದರೂ, ಆ ಮತದಾರರ ವಿವರಗಳು ಮತ್ತು ಅರ್ಜಿಗಳ ಸತ್ಯಾಸತ್ಯತೆಯನ್ನು ಪರಿಶೀಲಿಸುವ ಅಧಿಕಾರ ಚುನಾವಣಾ ಅಧಿಕಾರಿಗಳಿಗೆ ಇದೆ ಎಂದು ತಿಳಿಸಿದ್ದರು. ಆದರೆ, ಪೊಲೀಸರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು. ನಿಗದಿತ ಮಿತಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿಗಳನ್ನು ಸಲ್ಲಿಸಲಾಗಿದ್ದು, ನಿರ್ದಿಷ್ಟ ಸಮುದಾಯದ ಮತದಾರರ ಹೆಸರುಗಳನ್ನು ಸಾಮೂಹಿಕವಾಗಿ ಅಳಿಸುವ ಉದ್ದೇಶ ಹೊಂದಲಾಗಿತ್ತು ಎಂದು ವಾದಿಸಿದ್ದರು.
1960ರ ಮತದಾರರ ನೋಂದಣಿ ನಿಯಮಗಳನ್ನು ಪರಿಶೀಲಿಸಿದ ನ್ಯಾಯಮೂರ್ತಿ ಅನಂತ್ ರಾಮನಾಥ್ ಹೆಗ್ಡೆ, ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮತ್ತು ಹೆಸರು ತೆಗೆದುಹಾಕಲು ಕಾನೂನಿನಲ್ಲಿ ಸ್ಪಷ್ಟವಾದ ಪ್ರಕ್ರಿಯೆ ಇದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಯಾರಾದರೂ ಮತದಾರರ ಪಟ್ಟಿಗೆ ಸಂಬAಧಿಸಿದAತೆ ಆಕ್ಷೇಪ ಅಥವಾ ಅರ್ಜಿ ಸಲ್ಲಿಸಿದರೆ, ಸಂಬAಧಪಟ್ಟ ವ್ಯಕ್ತಿಗಳಿಗೆ ವಿಚಾರಣೆಗೆ ಹಾಜರಾಗಲು ಅವಕಾಶ ನೀಡಬೇಕು. ನೋಂದಣಿ ಅಧಿಕಾರಿಗಳು ಅರ್ಜಿಗಳನ್ನು ಪರಿಶೀಲಿಸಿ ತೀರ್ಮಾನ ಕೈಗೊಳ್ಳಬೇಕು. ಆ ತೀರ್ಮಾನದಿಂದ ಯಾರಿಗಾದರೂ ಅನ್ಯಾಯವಾದರೆ ಮೇಲ್ಮನವಿ ಸಲ್ಲಿಸಲೂ ಕಾನೂನಿನಲ್ಲಿ ಅವಕಾಶವಿದೆ ಎಂದು ನ್ಯಾಯಾಲಯ ಹೇಳಿಧೇ.
ಇಂತಹ ವ್ಯವಸ್ಥೆ ಇರುವಾಗ ಭಾರತೀಯ ನ್ಯಾಯ ಸಂಹಿತೆಯ (ಬಿಎನ್ಎಸ್) ಅಡಿಯಲ್ಲಿ ಅಪರಾಧದ ಅಂಶಗಳು ಸ್ಪಷ್ಟವಾಗಿ ಕಂಡುಬರದಿರುವ ಹಿನ್ನೆಲೆಯಲ್ಲಿ ತನಿಖೆಗೆ ಅವಕಾಶ ನೀಡುವುದಕ್ಕೆ ಸಮರ್ಥನೆ ಇಲ್ಲ ಎಂದು ಅಭಿಪ್ರಾಯಪಟ್ಟ ನ್ಯಾಯಾಲಯ, ಎಫ್ಐಆರ್ಗಳ ತನಿಖೆಗೆ ತಡೆ ನೀಡಿದೆ.





.
.
.
.
.
.
.
.
.
.
.
.
.
.
.
.
.
.
.
.
