ಬೆಂಗಳೂರು : ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬAಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದ ಅನುಮತಿ ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್ ಆದೇಶವನ್ನು ಎತ್ತಿ ಹಿಡಿದಿದೆ. ಸಿಎಂ ಸಿದ್ದರಾಮಯ್ಯನವರ ಅರ್ಜಿ ವಜಾಗೊಳಿಸಿದೆ. ಈ ಮೂಲಕ ಹೈಕೋರ್ಟ್ ಸಿಎಂ ಸಿದ್ದರಾಮಯ್ಯ ಬಿಗ್ ಶಾಕ್ ನೀಡಿದೆ.
ಇಂದು ಮಧ್ಯಾಹ್ನ ೧೨ ಗಂಟೆಗೆ ಹೈಕೋರ್ಟ್ ನಲ್ಲಿ ಮುಡಾಹಗರಣ ಸಂಬAಧ ತೀರ್ಪು ಪ್ರಕಟಿಸಿರುವ ನ್ಯಾಯಮೂರ್ತಿಗಳು, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ನೀಡಿರುವ ರಾಜ್ಯಪಾಲರ ಪ್ರಾಸಿಕ್ಯೂಷನ್ ಆದೇಶವನ್ನು ಎತ್ತಿ ಹಿಡಿದಿದ್ದಾರೆ.
ಸಿಎಂ ವಿರುದ್ಧ ಖಾಸಗಿ ದೂರುದಾರರೇ ಅನುಮತಿ ಕೋರಬಹುದು. ಸಂವಿಧಾನದ ವಿಧಿ ‘17 ಎ’ ಅಡಿ ಅನುಮತಿ ಕೋರಿದ್ದು ಸರಿಯಾಗಿದೆ. ಸಚಿವ ಸಂಪುಟದ ಶಿಫಾರಸನ್ನು ರಾಜ್ಯಪಾಲರು ತಿರಸ್ಕರಿಸಿದ್ದು ಸರಿಯಾಗಿದೆ. ರಾಜ್ಯಪಾಲರು ವಿವೇಚನೆ ಬಳಸಿದ್ದಾರೆ. ‘17 ಎ’ ಅಡಿಯ ಆದೇಶ ಸಮರ್ಪಕವಾಗಿದೆ ಎಂದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಸಿಎಂ ಸಿದ್ದರಾಮಯ್ಯ ಅರ್ಜಿಯನ್ನು ವಜಾಗೊಳಿಸಿದರು.
ಪ್ರಕರಣ ಸಂಬಂಧ ಸಲ್ಲಿಕೆಯಾಗಿದ್ದ ಅರ್ಜಿಯ ಬಗ್ಗೆ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ 6 ದಿನಗಳ ಸುದೀರ್ಘ ವಾದ ಮಂಡನೆ ಆಲಿಸಿತ್ತು. ಸಿಎಂ ಸಿದ್ದರಾಮಯ್ಯ ಪರ ವಕೀಲರು, ಸಾಲಿಸಿಟರ್ ಜನರಲ್ ಹಾಗೂ ದೂರುದಾರರ ಪರ ವಕೀಲರು ಸುದೀರ್ಘ ವಾದ ಮಂಡನೆ ಮಾಡಿದ್ದರು.







in 
