

ಬೆಂಗಳೂರು, ನ.27: ಕಸ್ತೂರಿ ರಂಗನ್ ವರದಿ ನೂನ್ಯತೆಯ ಬಗ್ಗೆ ಪರಿಶೀಲನೆ ನಡೆಸಲು ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚನೆಗೆ ನಿರ್ಧಾರ ಮಾಡಲಾಗಿದೆ. ಯುನೆಸ್ಕೋ ಜೀವವೈವಿಧ್ಯ ತಾಣವಾದ ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ಪ್ರದೇಶದ ವ್ಯಾಪ್ತಿಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಅಧಿಸೂಚನೆಗೆ ಪರ್ಯಾಯವಾಗಿ ರಾಜ್ಯ ಸರ್ಕಾರವು ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ ಕುನ್ಹಾ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ಹಾಗೂ ಗ್ರಾಮ ಮಟ್ಟದ ಸಮಿತಿಗಳನ್ನು ರಚಿಸಿದೆ.
ಕಸ್ತೂರಿರಂಗನ್ ವರದಿಯ ಅಂಶಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಸರಿಪಡಿಸುವ ಕ್ರಮಗಳನ್ನು ಶಿಫಾರಸು ಮಾಡುವುದು ಈ ಸಮಿತಿಯ ಮುಖ್ಯ ಉದ್ದೇಶವಾಗಿದೆ. ಭೂ ಮಂಜೂರಾತಿ, ಬಗರ್ ಹುಕುಂ ಸಾಗುವಳಿ ಚೀಟಿ ಹಾಗೂ ಹಕ್ಕುಪತ್ರಗಳ ಅರ್ಜಿಗಳನ್ನು ಗಣನೆಗೆ ತೆಗೆದುಕೊಂಡು ಪರಿಸರ ಸೂಕ್ಷ್ಮ ಪ್ರದೇಶದ ವ್ಯಾಪ್ತಿಯನ್ನು ಕಡಿತಗೊಳಿಸುವ ಕುರಿತು ಇದು ವರದಿ ನೀಡಲಿದೆ. ಈ ಸಮಿತಿಯು ವಾಸ್ತವಿಕ ಸ್ಥಿತಿಗತಿಗಳ ಪರಿಶೀಲನೆ, ವಿವರಗಳು, ಭೂ ಮಂಜೂರಾತಿ ಮತ್ತು ಹಕ್ಕುಪತ್ರಗಳ ಅರ್ಜಿಗಳನ್ನು ಗಣನೆಗೆ ತೆಗೆದುಕೊಳ್ಳಲಿದೆ. ಭೌತಿಕ ಪರಿಶೀಲನೆ ನಡೆಸಲು, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಮತ್ತು ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲು ಪಂಚಾಯತ್ ಅಧ್ಯಕ್ಷರ ನೇತೃತ್ವದಲ್ಲಿ ಗ್ರಾಮ ಪಂಚಾಯಿತಿ ಮಟ್ಟದ ಸಮಿತಿಗಳನ್ನು ಸಹ ಈ ಅಧಿಸೂಚನೆಯ ಮೂಲಕ ರಚಿಸಲಾಗಿದೆ.
ಕೇಂದ್ರ ಸರ್ಕಾರವು, ಪಶ್ಚಿಮ ಘಟ್ಟದ 57 ಸಾವಿರ ಚದರ ಕಿಮೀ ಪ್ರದೇಶವನ್ನು ಪರಿಸರ ಸೂಕ್ಷ್ಮ ವಲಯ ಎಂದು ಘೋಷಿಸಿತ್ತು. ಈ ಸಂಬAಧ ಕೇಂದ್ರ ಸರಕಾರ ಕರಡು ಅಧಿಸೂಚನೆ ಹೊರಡಿಸಿದ್ದು, ಕರಡು ವರದಿ ಪ್ರಕಾರ ಮಹಾರಾಷ್ಟ್ರ, ಕರ್ನಾಟಕ, ಕೇರಳ, ತಮಿಳುನಾಡು, ಗೋವಾ, ಗುಜರಾತ್ ರಾಜ್ಯ ವ್ಯಾಪ್ತಿಯ 56,826 ಚದರ ಕಿ.ಮೀ. ಪಶ್ಚಿಮ ಘಟ್ಟ ಪ್ರದೇಶ ಪರಿಸರ ಸೂಕ್ಷ್ಮ ವಲಯದಲ್ಲಿದೆ. ಇನ್ನು ಪರಿಸರ ಸೂಕ್ಷ್ಮ ವಲಯದಲ್ಲಿ ಗಣಿಗಾರಿಕೆ, ಕಟ್ಟಡ ನಿರ್ಮಾಣ, ಶಾಖೋತ್ಪನ್ನ ವಿದ್ಯುತ್ ಘಟಕಗಳು, ನಿಷೇಧಿತ (ರೆಡ್ ಇಂಡಸ್ಟ್ರೀಸ್) ಕೈಗಾರಿಕೆಗಳ ಚಟುವಟಿಕೆಗೆ ನಿರ್ಬಂಧಿಸಲಾಗಿದೆ.






.
.
.
.
.
.
.
.
.
.
.
.
.
.
.
.
.
.
.
.
