ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮಂಗಳೂರು ಹೊರವಲಯದ ವಾಮಂಜೂರು ಬಳಿಯ ಮಂಗಳೂರು-ಮೂಡಬಿದ್ರೆ-ಕಾರ್ಕಳ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಗುಡ್ಡ ಕುಸಿತವಾಗಿದೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಆಟೋ ಹೋಗುತ್ತಿದ್ದಾಗಲೇ ಗುಡ್ಡ ಕುಸಿದಿದೆ. ಅದೃಷ್ಟವಶಾತ ಯಾವುದೇ ಅನಾಹುತ ಸಂಭವಿಸಿಲ್ಲ. ಗುಡ್ಡ ಕುಸಿದು ಒಂದು ಬದಿಯ ರಸ್ತೆ ಸಂಪೂರ್ಣ ಬಂದ್ ಆಗಿದೆ. ಒಂದು ಬದಿಯ ರಸ್ತೆಯಲ್ಲೇ ಎರಡು ಕಡೆಯ ವಾಹನಗಳು ಸಂಚಾರ ನಡೆಸುತ್ತಿವೆ.