ಶಿವಮೊಗ್ಗ: ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬAಧಿಸಿAತೆ ಸಾಕ್ಷಿಗೆ ಬೆದರಿಕೆ ಹಾಕಿದ ಯುವಕನ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಎನ್‌ಐಎ ನ್ಯಾಯಾಲಯದ ಸೂಚನೆ ಮೇರೆಗೆ ಶಿವಮೊಗ್ಗದ ತುಂಗಾನಗರ ಠಾಣೆಯಲ್ಲಿ ಅನಾಮಿಕ ವ್ಯಕ್ತಿಯ ಮೇಲೆ ಸಾಕ್ಷಿಯೊಬ್ಬರು ದೂರು ನೀಡಿದ ನಂತರ ಎಫ್‌ಐಆರ್ ದಾಖಲಾಗಿದೆ.
ಹರ್ಷ ಹತ್ಯೆ ಪ್ರಕರಣದಲ್ಲಿ ಪೆಟ್ರೋಲ್ ಬಂಕ್ ಸಿಬ್ಬಂದಿ ಸಾಕ್ಷಿಯಾಗಿದ್ದ. ಡಿಸೆಂಬರ್ 12ರಂದು ಎನ್‌ಐಎ ನ್ಯಾಯಾಲಯದಲ್ಲಿ ಸಾಕ್ಷಿ ಹೇಳಿದ್ದ ಯುವಕ ಅನಂತರ ಸಾಕ್ಷಿ ಹೇಳದಂತೆ ಅಪರಿಚಿತ ವ್ಯಕ್ತಿಯಿಂದ ಬೆದರಿಕೆ ಹಾಕಲಾಗಿತ್ತು. ಮರುದಿನ ಕೋರ್ಟ್ ಸೂಚನೆಯ ಮೇರೆಗೆ ಪ್ರಕರಣ ದಾಖಲಾಗಿದೆ.
ಶಿವಮೊಗ್ಗದ ಸೀಗೆಹಟ್ಟಿ ಬಳಿ ಎರಡು ವರ್ಷದ ಹಿಂದೆ ಹರ್ಷ ಹತ್ಯೆ ನಡೆದಿತ್ತು. ಈ ಪ್ರಕರಣಕ್ಕೆ ಸಂಬAಧಿಸಿದAತೆ ಪೆಟ್ರೋಲ್ ಬಂಕ್ ಉದ್ಯೋಗಿಯೊಬ್ಬನನ್ನು ಎನ್‌ಐಎ ಸಾಕ್ಷಿಯಾಗಿ ಪರಿಗಣಿಸಿತ್ತು.ಈಗ ಆತನಿಗೆ ಅಪರಿಚಿತನೊಬ್ಬ ಬೆದರಿಕೆ ಒಡ್ಡಿರುವ ಆರೋಪ ಕೇಳಿ ಬಂದಿದೆ. ಹಿಂದೂ ಹರ್ಷ ಹತ್ಯೆಯಾದ ದಿನ ಆರೋಪಿಗಳು ಶಿವಮೊಗ್ಗದ ಪೆಟ್ರೋಲ್ ಬಂಕ್‌ನಲ್ಲಿ ತಮ್ಮ ಕಾರಿಗೆ ಇಂಧನ ಭರ್ತಿ ಮಾಡಿಸಿಕೊಂಡಿದ್ದರು. ಪೆಟ್ರೋಲ್ ಬಂಕ್‌ನಲ್ಲಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ಪೆಟ್ರೋಲ್ ಭರ್ತಿ ಮಾಡಿದ್ದ. ಈ ಕಾರಣಕ್ಕೆ ಆತನನ್ನು ಸಾಕ್ಷಿಯಾಗಿ ಪರಿಗಣಿಸಲಾಗಿತ್ತು.
ಸದ್ಯ ಆ ಯುವಕ ಪೆಟ್ರೋಲ್ ಬಂಕ್ ತೊರೆದು ಬೇರೆ ಕೆಲಸ ಮಾಡುತ್ತಿದ್ದಾನೆ. ಕೆಲ ದಿನಗಳ ಹಿಂದೆ ಪೆಟ್ರೋಲ್ ಬಂಕ್‌ಗೆ ಸ್ಕೂಟಿಯಲ್ಲಿ ತೆರಳಿದ್ದ ವ್ಯಕ್ತಿಯೊಬ್ಬ ಆ ಯುವಕ ಯಾರು ಎಂದು ವಿಚಾರಿಸಿದ್ದ. ಆತ ಕೆಲಸ ಬಿಟ್ಟಿರುವುದಾಗಿ ತಿಳಿಸಿದಾಗ, ಕೋರ್ಟ್ಗೆ ಹೋಗುವುದು ಬೇಡ ಎಂದು ಹೇಳಿ ಎಂದು ಬಂಕ್ ಸಿಬ್ಬಂದಿಗೆ ತಿಳಿಸಿ ಹೋಗಿದ್ದ ಎಂದು ಆರೋಪಿಸಲಾಗಿದೆ.