ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬAಧಿಸಿದAತೆ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಂಗಳೂರಿನ ಬಜ್ಪೆಯಲ್ಲಿ 10 ಕಡೆ ಮತ್ತು ಸುರತ್ಕಲ್‌ನಲ್ಲಿ 4 ಕಡೆ ಹಲವರ ಮನೆ, ಕಚೇರಿ ಮೇಲೆ ದಾಳಿ ಮಾಡಿರುವ ಎನ್‌ಐಎ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸಿದ್ದು, ಕೆಲವರನ್ನು ವಿಚಾರಣೆಗೂ ಒಳಪಡಿಸಿದ್ದಾರೆ.
ಮಂಗಳೂರು ಹೊರವಲಯದ ಬಜ್ಪೆಯ ಕಿನ್ನಿಪದವು ಎಂಬಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಹತ್ಯೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಹತ್ಯೆ ಮಾಡಿದ ಮತ್ತು ಹತ್ಯೆಗೆ ಸಹಕರಿಸಿದವರು ಸೇರಿದಂತೆ 12 ಜನರನ್ನು ಬಜಪೆ ಪೊಲೀಸರು ಬಂಧಿಸಿದ್ದರು. ಬಳಿಕ ಕೇಂದ್ರ ಗೃಹ ಇಲಾಖೆ ಈ ಪ್ರಕರಣವನ್ನ ಎನ್‌ಐಎ ಹೆಗಲಿಗೆ ನೀಡಿತ್ತು.
ಸುಹಾಸ್ ಶೆಟ್ಟಿ ಹೆತ್ತವರು ರಾಜ್ಯಪಾಲರ ಮೂಲಕ ಪ್ರಕರಣವನ್ನು ಎನ್‌ಐಎಗೆ ನೀಡುವಂತೆ ಮನವಿ ಮಾಡಿದ್ದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಗಮನಕ್ಕೂ ಈ ಹತ್ಯೆಯ ಹಿಂದಿರುವ ಶಕ್ತಿಗಳ ಬಗ್ಗೆ ಗಮನಕ್ಕೆ ತಂದಿದ್ದರು. ಈ ಹಿನ್ನಲೆಯಲ್ಲಿ ಕೇಂದ್ರ ಗೃಹ ಇಲಾಖೆಯೇ ಸುಹಾಸ್ ಹತ್ಯೆ ಪ್ರಕರಣವನ್ನು ಎನ್‌ಐಎಗೆ ವಹಿಸಿತ್ತು. ಹಿಂದೂ ಮತ್ತು ಬಿಜೆಪಿ ಮುಖಂಡರು ಕೂಡ ಈ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಬೇಕು ಎಂದು ಒತ್ತಾಯಿಸುತ್ತಲೇ ಬಂದಿದ್ದರು. ಪ್ರಕರಣದಲ್ಲಿ ನಿಷೇಧಿತ ಪಿಎಫ್‌ಐ ಸಂಘಟನೆ ನೇರವಾಗಿ ಭಾಗಿಯಾಗಿದೆ, ಜೊತೆಗೆ ಹತ್ಯೆಗೆ ವಿದೇಶದಿಂದಲೂ ಹಣದ ಹೊಳೆ ಹರಿದು ಬಂದಿದೆ ಎಂದು ಆರೋಪಿಸಲಾಗಿತ್ತು.