ಕಾರ್ಕಳ: ಸಾಮಾಜಿಕ ಜಾಲತಾಣಗಳಲ್ಲಿ ಕೋಮು ದ್ವೇಷಕ್ಕೆ ಪ್ರಚೋದನೆ ನೀಡುವ ಪೋಸ್ಟರ್ ಹಂಚಿಕೊಂಡ ಆರೋಪದ ಮೇಲೆ ಅಜೆಕಾರು ಪೊಲೀಸರು ಹಿಂದೂ ಮುಖಂಡ ರತ್ನಾಕರ್ ಅಮೀನ್ ಎಂಬವರ ವಿರುದ್ಧ ಸುಮೊಟೊ ಕೇಸ್ ದಾಖಲಿಸಿ ಅವರನ್ನು ಬಂಧಿಸಿದ್ದಾರೆ.
ಸರ್ಕಾರ ಈಗಾಗಲೇ ಆ್ಯಂಟಿ ಕಮ್ಯುನಲ್ ಫೋರ್ಸ್ ರಚನೆ ಮಾಡಿದ್ದು ಪೊಲೀಸರು ಸೋಶಿಯಲ್ ಮೀಡಿಯಾದಲ್ಲಿ ಕೋಮು ಭಾವನೆ ಕೆರಳಿಸುವವರ ವಿರುದ್ಧ ಹದ್ದಿನ ಕಣ್ಣು ಇಡಲಿದ್ದಾರೆ