Share this news

ಕಾರ್ಕಳ: ವಿಪರೀತ ಮದ್ಯಸೇವನೆ ಮಾಡುವ ಚಟ ಹೊಂದಿದ್ದ ವ್ಯಕ್ತಿಯೊಬ್ಬರು ಜೀವನದಲ್ಲಿ ಜುಗುಪ್ಸೆಗೊಂಡು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ‌.
ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ದರ್ಣಪ್ಪ (61) ಎಂಬವರು ವಿಷ ಸೇವಿಸಿ ಮೃತಪಟ್ಟ ದುರ್ದೈವಿ. ಅವರು ವಿಪರೀತ ಮದ್ಯಸೇವನೆ ಮಾಡುತ್ತಿದ್ದು ಕಳೆದ 2 ವರ್ಷಗಳ ಹಿಂದೆ ರಸ್ತೆ ಅಪಘಾತದಿಂದ ಎಡಗೈಗೆ ಉಂಟಾದ ಗಾಯದಿಂದ ಪದೇಪದೇ ನೋವು ಉಲ್ಬಣಗೊಳ್ಳುತ್ತಿದ್ದ ಹಿನ್ನೆಲೆಯಲ್ಲಿ ಕೆಲಸ ಮಾಡಲು ಕಷ್ಟವಾಗುತ್ತಿದ್ದು ಇದರಿಂದ ಮನನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ಏ 24 ರಂದು ಕೀಟನಾಶಕ ಸೇವಿಸಿ ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಏ 28ರಂದು ಭಾನುವಾರ ಬೆಳಗ್ಗೆ 11 ಗಂಟೆಗೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ‌. ಈ ಕುರಿತು ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

 

                        

                          

Leave a Reply

Your email address will not be published. Required fields are marked *