ಕಾರ್ಕಳ: ಪುರಸಭಾ ಸದಸ್ಯನೋರ್ವ ವ್ಯಕ್ತಿಯೊಬ್ಬರ ಮೇಲೆ ದೊಣ್ಣೆಯಿಂದ ಅಮಾನುಷವಾಗಿ ಹಲ್ಲೆಗೈದ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಕಾರ್ಕಳ ಪುರಸಭೆಯ ಕಾಂಗ್ರೆಸ್ ಸದಸ್ಯ ಸೀತಾರಾಮ ಎಂಬವರು ಬಂಡೀಮಠದಲ್ಲಿನ ನಂದಿನಿ ಹಾಲಿನ ಬೂತ್ ಬಳಿ ನಿಟ್ಟೆ ಗ್ರಾಮದ ಮಹಾಬಲ ಮೂಲ್ಯ ಎಂಬುವರಿಗೆ ದೊಣ್ಣೆಯಿಂದ ಹಲ್ಲೆ ನಡೆಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಇದಕ್ಕೆ ಪೂರಕ ಎಂಬಂತೆ ಸೀತಾರಾಮ ಅವರು ಕೈಯಲ್ಲಿ ದೊಣ್ಣೆ ಹಿಡಿದುಕೊಂಡು ಏರು ಧ್ವನಿಯಲ್ಲಿ ಸ್ಥಳೀಯರ ಜತೆ ಮಾತಿನ ಚಕಮಕಿ ನಡೆಸಿರುವ ವಿಡಿಯೋ ವೈರಲ್ ಆಗಿದೆ.
ಯಾವ ಕಾರಣಕ್ಕಾಗಿ ಈ ಹಲ್ಲೆ ನಡೆದಿದೆ ಎನ್ನುವುದು ಸ್ಪಷ್ಟವಾಗಿಲ್ಲ.
ಆದರೆ ಜವಾಬ್ದಾರಿ ಸ್ಥಾನದಲ್ಲಿರುವ ಜನಪ್ರತಿನಿಧಿಯೊಬ್ಬರು ಅಮಾಯಕನ ಮೇಲೆ ದರ್ಪ ತೋರಿರುವ ವಿರುದ್ಧ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.