Share this news

ಹಾವೇರಿ(ಜೂ.28): ನಿಂತಿದ್ದ ಲಾರಿಗೆ ಟಿಟಿ ವಾಹನ ಹಿಂದಿನಿಂದ ಗುದ್ದಿದ ಪರಿಣಾಮ 13 ಜನರು ಮೃತಪಟ್ಟ ಘಟನೆ ಹಾವೇರಿಯ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಪೂನಾ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು(ಶುಕ್ರವಾರ) ಬೆಳಗ್ಗೆ ನಡೆದಿದೆ.

ಹೊಸ  ಟಿಟಿ ವಾಹನ ಖರೀದಿಸಿ ದೇವಸ್ಥಾನಕ್ಕೆ ತೆರಳಿ ಪೂಜೆ ಮಾಡಿಸಿ ಮರಳುವಾಗ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 17 ಮಂದಿ ಪೈಕಿ 13 ಮಂದಿ ಮೃತಪಟ್ಟಿದ್ದಾರೆ. ಬದುಕುಳಿದ ನಾಲ್ವರ ಪರಿಸ್ಥಿತಿ ಗಂಭೀರವಾಗಿದೆ. 

ಹಾವೇರಿಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಈ ಅಪಘಾತ ನಡೆಸಿದೆ. ಪುಣೆ ಬೆಂಗಳೂರು ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಟಿಟಿ ಡಿಕ್ಕಿಯಾದ ಪರಿಣಾಮ ಅಪಘಾತದ ತೀವ್ರತೆ ಹೆಚ್ಚಾಗಿದೆ.ಘಟನೆಯಲ್ಲಿ 4 ವರ್ಷದ ಹಾಗೂ 6 ವರ್ಷದ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಒಟ್ಟು 13 ಮಂದಿ ಮೃತಪಟ್ಟಿದ್ದಾರೆ.  ಪರಶುರಾಮ್ (45), ಭಾಗ್ಯ (40), ನಾಗೇಶ್(50), ವಿಶಾಲಾಕ್ಷಿ(50)ಸುಭದ್ರಾ ಭಾಯಿ(65), ಪುಣ್ಯ( 50), ಮಂಜುಳಾ ಭಾಯಿ( 57), ಚಾಲಕ ಆದರ್ಶ್ ( 23), ಮಾನಸಾ( 24), ರೂಪಾ( 40),ಮಂಜುಳಾ( 50) ಮೃತಪಟ್ಟಿದ್ದಾರೆ.

ಮೃತರು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆ ಹೊನ್ನೂರು ಬಳಿಯ ಎಮ್ಮಿಹಟ್ಟಿ ಗ್ರಾಮದವರು ಎಂದು ತಿಳಿದು ಬಂದಿದೆ.  ಕಲಬುರಗಿ ಜಿಲ್ಲೆಯ ಚಿಂಚೊಳ್ಳಿ ಮಾಯಮ್ಮನ ದರ್ಶನ ಮಾಡಿಕೊಂದು ಸ್ವಗ್ರಾಮಕ್ಕೆ ವಾಪಾಸಾಗುವಾಗ ಈ ದುರ್ಘಟನೆ ಸಂಭವಿಸಿದೆ. ಟಿಟಿಯಲ್ಲಿ ಒಟ್ಟು  17 ಜನ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. 4 ಮಂದಿ ಗಾಯಾಳುಗಳಿಗೆ ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. 

 

 

                        

                          

 

 

 

 

 

                        

                          

 

 

 

 

Leave a Reply

Your email address will not be published. Required fields are marked *