ಹೆಬ್ರಿ: ಮಹೀಂದ್ರಾ ಬೊಲೆರೊ ಹಾಗೂ ಮಾರುತಿ ಸ್ವಿಫ್ಟ್ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಓರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ಜಕ್ಕನಮಕ್ಕಿ ಎಂಬಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದೆ.ಮೃತಪಟ್ಟ ಪ್ರಯಾಣಿಕನನ್ನು ಬಿಸ್ತ್ವಾನ್ ಎಂದು ಗುರುತಿಸಲಾಗಿದೆ.
ಸಾಗರದಿಂದ ಮಣಿಪಾಲ ಆಸ್ಪತ್ರೆಗೆ ಕಾರಿನಲ್ಲಿ ಐವರು ಪ್ರಯಾಣಿಸುತ್ತಿದ್ದು,ಬೊಲೆರೊ ವಾಹನ ಆಗುಂಬೆ ಕಡೆಗೆ ಹೋಗುತ್ತಿದ್ದ ವೇಳೆ ಜಕ್ಕನಮಕ್ಕಿ ಅಪಾಯಕಾರಿ ತಿರುವಿನಲ್ಲಿ ಈ ದುರ್ಘಟನೆ ಸಂಭವಿಸಿದೆ. ಈ ಅಪಘಾತದಿಂದ ನಾಲ್ವರಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೊಲೆರೋ ವಾಹನಗಳ ನಡುವಿನ ಡಿಕ್ಕಿಯಲ್ಲಿ ಕಾರಿನಲ್ಲಿ ಇದ್ದ ಓರ್ವ ಪ್ರಯಾಣಿಕರು ಸಾವನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಕಾರಿನಲ್ಲಿ ಒಟ್ಟು ಐದು ಜನ ಪ್ರಯಾಣಿಸುತ್ತಿದ್ದರು. ಉಳಿದ ನಾಲ್ಕು ಪ್ರಯಾಣಿಕರಿಗೆ ಗಂಭೀರ ಸ್ವರೂಪದ ಗಾಯಗಳಾಗಿದೆ. ಬೊಲೆರೊ ವಾಹನದಲ್ಲಿ ರೈಲ್ವೇ ಪೊಲೀಸರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.
ಹೆಬ್ರಿ ಪೊಲೀಸ್ ಠಾಣಾಧಿಕಾರಿ ಮಹೇಶ್ ಟಿ ಎಂ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ಪ್ರಕರಣ ದಾಖಲಾಗಿದೆ
ಹೆಚ್ಚುತ್ತಿರುವ ಅಪಘಾತ: ರಸ್ತೆ ಅಗಲೀಕರಣಕ್ಕೆ ಆಗ್ರಹ
ಹೆಬ್ರಿಯಿಂದ ಸೋಮೇಶ್ವರಕ್ಕೆ ಹೋಗುವ ರಾಷ್ಟ್ರೀಯ ಹೆದ್ದಾರಿಯ ತಿರುವುಗಳು ಅತ್ಯಂತ ಕಿರಿದ್ದಾಗಿದ್ದು ಇದರಿಂದ ಈ ಭಾಗದಲ್ಲಿ ಪದೇಪದೇ ವಾಹನಗಳ ಅಪಘಾತಗಳು ನಡೆಯುತ್ತಿದ್ದು ಸಾಕಷ್ಟು ಸಾವು ನೋವುಗಳು ಸಂಭವಿಸಿದೆ. ಕಿರಿದಾದ ರಸ್ತೆಗಳನ್ನು ವಿಸ್ತರಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
K