
ಬಳ್ಳಾರಿ, ಮಾ.08: ಶಿವಮೊಗ್ಗದಲ್ಲಿ ಬಾಲಕರೇ ವಿದ್ಯಾರ್ಥಿಯನ್ನು ಕೊಲೆ ಮಾಡಿರುವ ಘಟನೆ ಮಾಸುವ ಮುನ್ನವೇ ರಾಜ್ಯದಲ್ಲಿ ಅಂತಹುದೇ ಮತ್ತೊಂದು ದಾರುಣ ಘಟನೆ ನಡೆದಿದೆ. ಬಳ್ಳಾರಿಯ ಖಾಸಗಿ ಶಾಲೆಗೆ ಸೇರಿದ ಹಾಸ್ಟೆಲ್ ಒಂದರಲ್ಲಿ ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆಯಲ್ಲಿ ಓರ್ವ ಬಾಲಕ ಮೃತಪಟ್ಟ ಘಟನೆ ನಡೆದಿದೆ. ಹಾಸ್ಟೆಲ್ನ ವಾರ್ಡನ್ ಸೇರಿ ಹಲವು ಬಾಲಕರ ಮೇಲೆ 9ನೇ ತರಗತಿ ವಿದ್ಯಾರ್ಥಿ ರಾಡ್ನಿಂದ ಹಲ್ಲೆ ನಡೆಸಿದ ಪರಿಣಾಮ ಓರ್ವ ಮೃತಪಟ್ಟಿದ್ದರೆ ಇತರ ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಹಲ್ಲೆ ನಡೆಸಿ ಬಾಲಕ ಪರಾರಿಯಾಗಿದ್ದು, ಗಾಯಾಳುಗಳನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಬಾಲಕ ರಾಡ್ನಿಂದ ಹೊಡೆದಿದ್ದನೆಂದು ಹೇಳಲಾಗಿದ್ದು, ಹಲ್ಲೆ ನಡೆಸಿರುವ ವಿದ್ಯಾರ್ಥಿ ಡ್ರಗ್ ಅಡಿಕ್ಟ್ ಆಗಿರುವ ಶಂಕೆ ವ್ಯಕ್ತವಾಗಿದೆ. ಅಲ್ಲದೇ ಇಷ್ಟೆಲ್ಲ ಹುಡುಗರ ಮೇಲೆ ಆತ ಒಬ್ಬನೇ ಹಲ್ಲೆ ಮಾಡಲು ಹೇಗೆ ಸಾಧ್ಯವೇ ಎನ್ನುವ ಅನುಮಾನವೂ ಮೂಡಿದೆ. ಈ ಎಲ್ಲಾ ಘಟನೆಗೆ ಶಾಲಾ ಆಡಳಿತ ಮಂಡಳಿಯೇ ನೇರ ಹೊಣೆ ಎಂದು ಮೃತ ವಿದ್ಯಾರ್ಥಿ ಪೋಷಕರು ಆರೋಪಿಸಿದ್ದಾರೆ.


.
.
.
.
.
.
.
.
.
.
