
ಕಾರ್ಕಳ, ಜೂ.09: ಬಿಜೆಪಿ ಕಾರ್ಯಕರ್ತರು ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಜನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ಮೂಲಕ ಪಕ್ಷ ಸಂಘಟನೆಗೆ ಹೆಚ್ಚಿನ ಬಲ ತುಂಬಬೇಕು ಎಂದು ಶಾಸಕ ಹಾಗೂ ಮಾಜಿ ಸಚಿವರಾದ ವಿ. ಸುನಿಲ್ ಕುಮಾರ್ ಹೇಳಿದರು.
ಅವರು ಹೊಸ್ಮಾರಿನ ಶ್ರೀ ಭಗವತಿ ಕಾಂಪ್ಲೆಕ್ಸ್‌ನಲ್ಲಿ ನಡೆದ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲಾ ಬೂತ್ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಅವರು ಪಕ್ಷ ಸಂಘಟನೆಯ ಮಹತ್ವದ ಕುರಿತು ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಿದರು. ಮುಂಬರುವ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕಾರ್ಯಕ್ರಮದಲ್ಲಿ ಕಾರ್ಯಕರ್ತರ ಜವಾಬ್ದಾರಿ ಹಾಗೂ ಕರ್ತವ್ಯಗಳ ಬಗ್ಗೆ ಕೂಲಂಕುಷ ಮಾಹಿತಿ ನೀಡಿದ ಅವರು, ರಾಜ್ಯ ಕಾಂಗ್ರೆಸ್ಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಜನರ ಮುಂದಿಡಬೇಕು ಜೊತೆಗೆ ಪಕ್ಷದ ಬಲವರ್ಧನೆಗಾಗಿ ಪ್ರತಿಯೊಬ್ಬ ಕಾರ್ಯಕರ್ತರು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.
ಸಭೆಯನ್ನು ಕ್ಷೇತ್ರಾಧ್ಯಕ್ಷರಾದ ನವೀನ್ ನಾಯಕ್ ಉದ್ಘಾಟಿಸಿ ಮಾತನಾಡಿ, ಬಿಜೆಪಿ ಕಾರ್ಯಕರ್ತರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಜನರ ಮುಂದೆ ತಂದು ಪಕ್ಷದ ಬೆಳವಣಿಗೆಗೆ ಶ್ರಮಿಸಬೇಕು ಎಂದು ಕರೆ ನೀಡಿದರು.
ಸಭೆಯಲ್ಲಿ ಉಪಾಧ್ಯಕ್ಷರಾದ ಜಯವರ್ಮ ಜೈನ್ ಮಾಪಾಲು, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಬೋಳ ಸತೀಶ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದಿವ್ಯ ಗಿರೀಶ್ ಅಮಿನ್, ತಾಲೂಕು ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿನುತಾ ಆಚಾರ್ಯ ಹಾಗೂ ತಾಲೂಕು ಪಂಚಾಯತ್ ಮಾಜಿ ಸದಸ್ಯೆ ಮಂಜುಳ ವಿಶ್ವನಾಥ್ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.


.
.
.
.
.
.
.
.
.
.
.
.
.
.
.
.
.
.
.
.
