
ಕಾರ್ಕಳ,ಡಿ.24: ಮಂಗಳೂರಿನ ಹೊಟೇಲ್ ಒಂದರಲ್ಲಿ ಕೆಲಸ ಮಾಡಿಕೊಂಡಿದ್ದ ಕಾರ್ಕಳ ತಾಲೂಕಿನ ಮಿಯ್ಯಾರು ಗ್ರಾಮದ ವಸಂತ ಶೆಟ್ಟಿ(66) ಎಂಬವರು ಅನಾರೋಗ್ಯದಿಂದ ಕಾರ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಡಿ.23 ರಂದು ಮೃತಪಟ್ಟಿದ್ದಾರೆ.
ವಸಂತ ಶೆಟ್ಟಿ ಹೊಟೇಲ್ ನಲ್ಲಿ ಕೆಲಸ ಮಾಡುತ್ತಿದ್ದಾಗಲೇ ಆರೋಗ್ಯ ಸರಿಯಿಲ್ಲದ ಕಾರಣದಿಂದ ಕಾರ್ಕಳಕ್ಕೆ ಬಂದಿದ್ದರು. ಬಳಿಕ ಅವರನ್ನು ಆಸ್ಪತೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


.
.
