ಕಾರ್ಕಳ: ಕುಕ್ಕುಂದೂರು ಗ್ರಾಮದಲ್ಲಿ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಕುಕ್ಕುಂದೂರು ನಿವಾಸಿ ವಿಜೇಂದ್ರ (33) ಪಿಯುಸಿ ವಿಧ್ಯಾಭ್ಯಾಸ ಮುಗಿಸಿ ಮನೆಯಲ್ಲಿಯೇ ಆನ್ ಲೈನ್ ಟ್ರೇಡಿಂಗ್ ಕೆಲಸ ಮಾಡಿಕೊಂಡಿದ್ದರು,ಆದರೆ ವ್ಯವಹಾರದಲ್ಲಿ ನಷ್ಟ ಅನುಭವಿಸಿದ ಹಿನ್ನೆಲೆಯಲ್ಲಿ ಆರ್ಥಿಕ ಸಮಸ್ಯೆಯಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಬುಧವಾರ ಮನೆಯ ನಡುಕೋಣೆಯಲ್ಲಿ ಪಕ್ಕಾಸಿಗೆ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಕುರಿತು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.