ಮಂಗಳೂರು: ‘ಕಾಪಾಡಿ, ಕೊಳಕು ಹಿಂದೂಗಳು ನನ್ನ ಹಿಂದೆ ಬಿದ್ದಿದ್ದಾರೆ. ಹೌದು ನಾನು ಭಾರತೀಯಳು, ಹೌದು ನಾನು ಭಾರತವನ್ನು ದ್ವೇಷಿಸುತ್ತೇನೆ’ ಎಂದು ಮಂಗಳೂರಿನ ವೈದ್ಯೆಯೊಬ್ಬರು ಸಾಮಾಜಿಕ ಮಾಧ್ಯಮದಲ್ಲಿ ಸಂದೇಶ ಪ್ರಕಟಿಸಿದ್ದು ಇದೀಗ ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿದೆ. ಜಮ್ಮು ಕಾಶ್ಮೀರದ ಪಹಲ್ಗಾಮ್ ದಾಳಿ ನಂತರ ಭಾರತ ಹಾಗೂ ಪಾಕಿಸ್ತಾನ ಮಧ್ಯೆ ಉದ್ವಿಗ್ನ ಪರಿಸ್ಥಿತಿ ಇರುವ ಸಂದರ್ಭದಲ್ಲಿಯೇ ವೈದ್ಯೆ ಈ ರೀತಿ ಪೋಸ್ಟ್ ಮಾಡಿರುವುದಕ್ಕೆ ಹಿಂದೂ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ.
ಮಂಗಳೂರಿನ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ಡೈಟೀಶನ್ ವೈದ್ಯೆಯಾಗಿರುವ ಅಫೀಫಾ ಫಾತೀಮಾ ಎನ್ನುವ ಯುವತಿ ಧರ್ಮ ಹಾಗೂ ದೇಶ ವಿರೋಧಿ ಪೋಸ್ಟ್ ಮಾಡಿದ್ದಾರೆ. ಈ ಮೂಲಕ ವಿವಾದದ ಬಿರುಗಾಳಿ ಎಬ್ಬಿಸಿದ್ದಾರೆ. ಸಾಮಾಜಿಕ ಜಾಲತಾಣ X ನಲ್ಲಿ ಈ ಯುವತಿ ಪೋಸ್ಟ್ ಹಾಕಿದ್ದಾಳೆ.HELP STINKY HINDUS BEHIMD ME (ಕಾಪಾಡಿ ಕೊಳಕು ಹಿಂದೂಗಳು ನನ್ನ ಹಿಂದೆ ಬಿದ್ದಿದ್ದಾರೆ), AM I INDIAN- YES, DO I HATE INDIA – YES, (ನಾನು ಭಾರತೀಯಳೇ- ಹೌದು, ನಾನು ಭಾರತವನ್ನು ದ್ವೇಷಿಸುತ್ತೇನೆಯೇ – ಹೌದು,) ಎಂದು ಸಾಮಾಜಿಕ ಜಾಲತಾಣದಲ್ಲಿಅಫೀಫ ಫಾತೀಮಾ ಪೋಸ್ಟ್ ಮಾಡಿದ್ದರು.
ಅಫೀಫ ಫಾತಿಮಾ ಅವರ ವಿವಾದಾತ್ಮಕ ಪೋಸ್ಟ್ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಯಿತು. ಅಫೀಫ ವಿರುದ್ದ ಕಠಿಣ ಕ್ರಮ ಕೈಗೊಳ್ಳು ವಂತೆ ಒತ್ತಾಯ ಕೇಳಿಬಂದಿತು. ಆಕ್ರೋಶ ಭುಗಿಲೇಳುತ್ತಿದ್ದಂತೆ ಎಚ್ಚೆತ್ತ ಹೈಲ್ಯಾಂಡ್ ಆಸ್ಪತ್ರೆಯ ಆಡಳಿತ ಮಂಡಳಿ, ಆಸ್ಪತ್ರೆಯಿಂದ ಅಫೀಫ ಅವರನ್ನು ವಜಾಗೊಳಿಸಿದೆ.
ಸದ್ಯ ಆಕೆಯ ವಿರುದ್ಧ ಮಂಗಳೂರು ನಗರದ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಹೈಲ್ಯಾಂಡ್ ಆಸ್ಪತ್ರೆ ಹೆಚ್ಆರ್ ಮೊಹಮ್ಮದ್ ಅಸ್ಲಾಂ ದೂರು ಆಧರಿಸಿ ಬಿಎನ್ಎಸ್ ಕಲಂ 196(1)(a), 353(2) ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.