ನವದೆಹಲಿ:ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟದ ನೇತೃತ್ವದ ಕಾಂಗ್ರೆಸ್ ಪಕ್ಷಕ್ಕೆ ನಿರೀಕ್ಷಿತ ಫಲಿತಾಂಶ ದೊರೆಯದಿದ್ದರೆ, ಪಕ್ಷದ ಭವಿಷ್ಯದ ಹಿತದೃಷ್ಟಿಯಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಿಂದೆ ಸರಿಯುವುದು ಉತ್ತಮ ಎಂದು ಕಾಂಗ್ರೆಸ್ ರಾಜಕೀಯ ತಂತ್ರಗಾರ ಪ್ರಶಾಂತ್ ಕಿಶೋರ್ ಸಲಹೆ ನೀಡಿದ್ದಾರೆ.
ಮಾಧ್ಯಮ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ‘ಕಳೆದ 10 ವರ್ಷಗಳಲ್ಲಿ ಕಾಂಗ್ರೆಸ್‌ಗೆ ಗೆಲುವು ದೊರಕಿಸಿಕೊಡಲು ಸಾಧ್ಯವಾಗ ದಿದ್ದರೂ, ರಾಹುಲ್ ಹಿಂದಕ್ಕೆ ಸರಿಯುತ್ತಿಲ್ಲ ಅಥವಾ ಬೇರೆಯವರಿಗೆ ಪಕ್ಷದ ಚುಕ್ಕಾಣಿ ನೀಡುತ್ತಿಲ್ಲ. ನನ್ನ ಪ್ರಕಾರ ಇದು ಪ್ರಜಾಪ್ರಭುತ್ವ ವಿರೋಧಿ’ ಎಂದು ಅಭಿಪ್ರಾಯಪಟ್ಟಿದ್ದಾರೆ.
300ಕ್ಕೂ ಅಧಿಕ ಸ್ಥಾನಗಳಲ್ಲಿ ಬಿಜೆಪಿಗೆ ಗೆಲುವು!
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ NDA ಮೈತ್ರಿಕೂಟ 300ಕ್ಕೂ ಹೆಚ್ಚು ಸ್ಥಾನಗಳಲ್ಲಿ ಜಯಗಳಿಸಲಿದೆ ಎಂದು ಪ್ರಶಾಂತ್ ಕಿಶೋರ್ ಭವಿಷ್ಯ ನುಡಿದಿದ್ದಾರೆ. ‘ತೆಲಂಗಾಣ, ಒಡಿಶಾ, ಪಶ್ಚಿಮ ಬಂಗಾಲ, ತಮಿಳುನಾಡಿನಲ್ಲಿ ಈ ಬಾರಿ ಹೆಚ್ಚು ಕ್ಷೇತ್ರಗಳು ಬಿಜೆಪಿ ತೆಕ್ಕೆಗೆ ಬರಲಿವೆ. ಪಶ್ಚಿಮ ಬಂಗಾಲದಲ್ಲಿ ನಂ.1 ಪಕ್ಷವಾಗಿ ಬಿಜೆಪಿ ಹೊರಹೊಮ್ಮಲಿದೆ ಎಂದು ಭವಿಷ್ಯ ನುಡಿದ್ದಾರೆ.
ಇತ್ತ ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಪಕ್ಷದ ಸೋಲಿನ ಬಗ್ಗೆ ಮುನ್ಸೂಚನೆ ನೀಡಿರುವುದು ಕಾಂಗ್ರೆಸ್ ಪಕ್ಷಕ್ಕೆ ಭಾರೀ ಆಘಾತವಾಗಿದೆ.
25 ಗ್ಯಾರಂಟಿಗಳನ್ನು ಘೋಷಣೆಗಳನ್ನು ಮಾಡಿರುವ ಕೈ ಪಡೆ ಮತದಾರನ ಮನಸ್ಸು ಗೆಲ್ಲುವಲ್ಲಿ ಯಶಸ್ವಿಯಾಗುತ್ತಾ ಎನ್ನುವುದು ಪ್ರಶ್ನೆಯಾಗಿದೆ