Share this news

ಬೆಂಗಳೂರು,ಜು.29: ಬಾಂಗ್ಲಾಅಕ್ರಮ ವಲಸಿಗರ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ದೂರಿನ ಮೇರೆಗೆ ನಗರದ ವೈದ್ಯರು ಹಾಗೂ ಸಾಮಾಜಿಕ ಕಾರ್ಯಕರ್ತರೊಬ್ಬರ ವಿರುದ್ಧ ಹಲ್ಲೆ ಹಾಗೂ ಜೀವ ಬೆದರಿಕೆ ಸೇರಿದಂತೆ ಇನ್ನಿತರ ಆರೋಪಗಳಡಿ ಎರಡು FIR ದಾಖಲಿಸಿದ ಪೊಲೀಸರ ನಡೆಯನ್ನು ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ.

ಸರ್ಕಾರ ಹಾಗೂ ಪೊಲೀಸರೇ ಅಕ್ರಮ ವಲಸಿಗರನ್ನು ಓಲೈಕೆ ಮಾಡುತ್ತಿದ್ದಾರೆ ಎಂದ ಹೈಕೋರ್ಟ್, ಪೊಲೀಸರ ನಡೆ ನಿಜಕ್ಕೂ ರಾಷ್ಟ್ರದ ಭದ್ರತೆ ಮತ್ತು ಹಿತಾಸಕ್ತಿಗೆ ಬೆದರಿಕೆಯಾಗಿದ್ದು, ಸರ್ಕಾರವು ಅಕ್ರಮ ವಲಸಿಗರಿಗೆ ಸಹಕರಿಸುವುದು ಮತ್ತು ಓಲೈಕೆ ಮಾಡುವುದನ್ನು ನಿಲ್ಲಿಸಬೇಕು ಎಂದು ತಾಕೀತು ಮಾಡಿದೆ.

ಏನಿದು ಪ್ರಕರಣ?
ಬೆಂಗಳೂರಿನ ಹೊಸ ಸಿದ್ದಾಪುರದಲ್ಲಿ ನೆಲೆಸಿರುವ ಬಾಂಗ್ಲಾದೇಶದ ಪ್ರಜೆ ನಸ್ರೀನಾ ಮತ್ತು ಕೊಡತಿ ಗ್ರಾಮದ ಕಾರ್ಮಿಕರ ಗುಡಿಸಲಿನಲ್ಲಿ ವಾಸವಿದ್ದ ಮೊಹಮ್ಮದ್ ಶೈದುಲ್ಲಾ ಇಸ್ಲಾಂ ನೀಡಿದ ದೂರು ಆಧರಿಸಿ ಕ್ರಮವಾಗಿ ಬೆಳ್ಳಂದೂರು ಮತ್ತು ವರ್ತೂರು ಠಾಣಾ ಪೊಲೀಸರು, ಮಹಿಳೆಯ ಗೌರವಕ್ಕೆ ಧಕ್ಕೆ, ಹಲ್ಲೆ, ಸ್ವಯಂ ಪ್ರೇರಣೆಯಿಂದ ನೋವುಂಟು ಮಾಡಿದ, ಶಾಂತಿಭAಗಕ್ಕೆ ಪ್ರಚೋದಿಸುವ ಉದ್ದೇಶದಿಂದ ಅವಮಾನ ಮಾಡಿದ, ಜೀವ ಬೆದರಿಕೆ ಮತ್ತು ಅಕ್ರಮವಾಗಿ ನಿರ್ಬಂಧ ಹೇರಿರುವುದೂ ಸೇರಿದಂತೆ ಇನ್ನಿತರ ಆರೋಪಗಳಡಿ ಅರ್ಜಿದಾರರ ವಿರುದ್ಧ ಪ್ರತ್ಯೇಕ FIR  ದಾಖಲಿಸಿದ್ದರು. ಅವುಗಳನ್ನು ರದ್ದುಪಡಿಸುವಂತೆ ಕೋರಿ ನಾಗೇಂದ್ರಪ್ಪ ಹೈಕೋರ್ಟ್ ಮೊರೆ ಹೋಗಿದ್ದರು.

ತಮ್ಮ ವಿರುದ್ಧ ದಾಖಲಿಸಿರುವ FIR ರದ್ದು ಕೋರಿ ವೈದ್ಯ ಹಾಗೂ ಸಾಮಾಜಿಕ ಕಾರ್ಯಕರ್ತರಾದ ಮಲ್ಲಸಂದ್ರದ ಟಿ.ನಾಗೇಂದ್ರಪ್ಪ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ಅಕ್ರಮ ವಲಸಿಗರನ್ನು ಸರ್ಕಾರ, ಪೊಲೀಸರೇ ಬೆಂಬಲಿಸುತ್ತಿದ್ದಾರೆ. ಬೆಂಗಳೂರಿನ ನಿವಾಸಿಗಳಿಗಿಂತ ವಲಸಿಗರೇ ಮುಖ್ಯವಾಗಿದ್ದಾರಾ? ಎಂದು ಪೊಲೀಸರ ಮತ್ತು ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿತು.ಅಲ್ಲದೇ ಮುಂದಿನ ವಿಚಾರಣೆವರೆಗೆ ಅರ್ಜಿದಾರರ ವಿರುದ್ಧ ಪೊಲೀಸರು ದಾಖಲಿಸಿರುವ FIR ಗಳಿಗೆ ತಡೆಯಾಜ್ಞೆ ನೀಡಿದ ಪೀಠ, ಅರ್ಜಿಯಲ್ಲಿ ವಿದೇಶಿಯರ ಪ್ರಾದೇಶಿಕ ನೋಂದಣಿ ಅಧಿಕಾರಿ ಅವರನ್ನು ಪ್ರತಿವಾದಿ ಮಾಡಿತು. ಹಾಗೆಯೇ, ಪ್ರಕರಣ ಕುರಿತು ಸಂಪೂರ್ಣ ಮಾಹಿತಿ ಒದಗಿಸುವಂತೆ ಪೊಲೀಸರು ಹಾಗೂ ಸರ್ಕಾರಕ್ಕೆ ಸೂಚನೆ ನೀಡಿ ಅರ್ಜಿಗಳ ವಿಚಾರಣೆಯನ್ನು ಆ.6ಕ್ಕೆ ಮುಂದೂಡಿತು.

ಅರ್ಜಿದಾರರ ಪರ ವಕೀಲ ಗಿರೀಶ್ ಭಾರದ್ವಾಜ್ , ಅರ್ಜಿದಾರರು ಅಕ್ರಮವಾಗಿ ನೆಲೆಸಿರುವವರ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡುತ್ತಿದ್ದರು. ಅದರಂತೆ, ಪ್ರಕರಣದಲ್ಲಿ ದೂರುದಾರರಾಗಿರುವ ಬೆಂಗಳೂರಿನ ಹೊಸ ಸಿದ್ದಾಪುರದಲ್ಲಿ ನೆಲೆಸಿರುವ ಬಾಂಗ್ಲಾದೇಶದ ಪ್ರಜೆ ನಸ್ರೀನಾ ಅವರ ಬಗ್ಗೆ ಮಾಹಿತಿ ನೀಡಿದ್ದರು. ದೂರುದಾರರು ಕಳೆದ 15 ವರ್ಷಗಳಿಂದ ಅಕ್ರಮವಾಗಿ ನೆಲೆಸಿದ್ದಾರೆ. ಈ ಬಗ್ಗೆ ಅರ್ಜಿದಾರರು ಜು.22ರಂದು ಬೆಳಗ್ಗೆ 11.30ಕ್ಕೆ ಮಾಹಿತಿ ನೀಡಿದ್ದರು. ದೂರುದಾರರ ಬಗ್ಗೆ ತನಿಖಾಧಿಕಾರಿಯು FRRO ಗೆ ಪತ್ರ ಬರೆದ ಕೇವಲ 15 ನಿಮಿಷಗಳಲ್ಲಿಯೇ ಬಾಂಗ್ಲಾಪ್ರಜೆಗಳು ನೀಡಿದ ದೂರು ದಾಖಲಿಸಿಕೊಂಡು ಹಲ್ಲೆ ಆರೋಪದ ಮೇರೆಗೆ FIR ದಾಖಲಿಸಿ ಅರ್ಜಿದಾರರನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. ಮರುದಿನ ಅವರು ನ್ಯಾಯಾಲಯದಿಂದ ಜಾಮೀನು ಪಡೆದು ಹೊರ ಬಂದಿದ್ದಾರೆ. ಅದೇ ದಿನ ಮಧ್ಯಾಹ್ನ ಕೊಡತಿ ಗ್ರಾಮದ ಕಾರ್ಮಿಕರ ಗುಡಿಸಲಿನಲ್ಲಿದ್ದ ಬಾಂಗ್ಲಾ ನಿವಾಸಿ ಮೊಹಮ್ಮದ್ ಶೈದುಲ್ಲಾ ಇಸ್ಲಾಂ ನೀಡಿದ ದೂರು ಆಧರಿಸಿ ವರ್ತೂರು ಠಾಣಾ ಪೊಲೀಸರು ಮತ್ತೊಂದು ದೂರು ದಾಖಲಿಸಿದ್ದಾರೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು.
ಆಗ ನ್ಯಾಯಪೀಠ, ಅಕ್ರಮ ವಲಸಿಗರನ್ನು ದೇಶದಿಂದ ಹೊರಹಾಕಿ ಎಂದು ನ್ಯಾಯಾಲಯ ನಿರ್ದೇಶಿಸುತ್ತಿದ್ದರೆ, ಪೊಲೀಸರು ಮಾತ್ರ ಅಕ್ರಮ ವಲಸಿಗರ ದೂರು ಸ್ವೀಕರಿಸಿ ನಮ್ಮ ದೇಶದ ಪ್ರಜೆಗಳ ವಿರುದ್ಧ ದೂರು, FIR ದಾಖಲಿಸಿದ್ದೀರಲ್ಲವೇ ಎಂದು ಖಾರವಾಗಿ ಪ್ರಶ್ನಿಸಿತು.

ಇದಕ್ಕೆ ಸರ್ಕಾರಿ ಅಭಿಯೋಜಕರು, ದೂರುದಾರರ ಮೇಲೆ ಅರ್ಜಿದಾರರು ಹಲ್ಲೆ ನಡೆಸಿದ್ದಾರೆಂಬ ಕಾರಣಕ್ಕೆ ದೂರು ದಾಖಲಿಸಲಾಗಿದೆ. ಬಾಂಗ್ಲಾಪ್ರಜೆ ಎಂದು ತಿಳಿದ ಕೂಡಲೇ ದೂರುದಾರರನ್ನು ವಿದೇಶಿಯರ ನೋಂದಣಿ ಅಧಿಕಾರಿ (FRRO) ಎದುರು ಹಾಜರುಪಡಿಸಲಾಯಿತು ಎಂದು ತಿಳಿಸಿದರು.ಆಗ ನ್ಯಾಯಪೀಠ, ದೂರುದಾರರು ಅಕ್ರಮವಾಗಿ ನೆಲೆಸಿದ್ದಾರೆಂದು ತೋರಿಸಿದ್ದಕ್ಕೆ 15 ನಿಮಿಷದಲ್ಲೇ ಅರ್ಜಿದಾರರ ವಿರುದ್ಧ ಪ್ರತಿದೂರು ದಾಖಲಿಸಲಾಗಿದೆ. ಕಾನೂನು ದುರ್ಬಳಕೆಗೆ ಇದಕ್ಕಿಂತ ಅತ್ಯುತ್ತಮ ಉದಾಹರಣೆ ಮತ್ತೊಂದಿಲ್ಲ. ದೂರುದಾರರನ್ನು ಗಡೀಪಾರು ಮಾಡಲು FRRO ಗೆ ನಿರ್ದೇಶನ ನೀಡಲಾಗುವುದು ಎಂದರು.

 

 

     

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

                                       

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

 

 

 

                 

 

 

 

.

 

 

 

 

 

 

 

 

 

 

 

 

 

 

 

 

 

 

 

 

 

.

 

 

 

 

 

 

 

 

 

Leave a Reply

Your email address will not be published. Required fields are marked *