

ಮಡಿಕೇರಿ, ಅ.14: ಕರ್ನಾಟಕದಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರ ಹಾವಳಿ ತೀವ್ರಗೊಳ್ಳುತ್ತಿದ್ದು. ಇತ್ತೀಚೆಗಷ್ಟೇ ಬೆಂಗಳೂರಿನ ಬೆಳ್ಳಂದೂರು ಮತ್ತು ವರ್ತೂರು ಭಾಗಗಳಲ್ಲಿ ನಡೆಸಲಾದ ಬೃಹತ್ ಕಾರ್ಯಾಚರಣೆಯಲ್ಲಿ 160ಕ್ಕೂ ಹೆಚ್ಚು ಬಾಂಗ್ಲಾ ಪ್ರಜೆಗಳನ್ನು ಗಡಿಪಾರು ಮಾಡಲಾಗಿತ್ತು. ಇದೀಗ ಮತ್ತೆ ಅಕ್ರಮ ಬಾಂಗ್ಲಾ ವಲಸಿಗರು ಪತ್ತೆಯಾಗಿದ್ದು, ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಬಾಳೆಲೆಯಲ್ಲಿ ನಾಲ್ವರು ಬಾಂಗ್ಲಾ ಪ್ರಜೆಗಳು ಸ್ಥಳೀಯರ ಕೈಗೆ ಸಿಕ್ಕಿಬಿದ್ದಿದ್ದಾರೆ.
ಪೊನ್ನಂಪೇಟೆ ತಾಲೂಕಿನ ಬಾಳೆಲೆ ಗ್ರಾಮದ ಕೊಟ್ಟಿಗೇರಿ ಎಂಬಲ್ಲಿರುವ ತೋಟದ ಮನೆಯೊಂದರಲ್ಲಿ ಆಶ್ರಯ ಪಡೆದಿದ್ದ ನಾಲ್ವರು ಬಾಂಗ್ಲಾದೇಶಿ ಪ್ರಜೆಗಳನ್ನು ಹಿಂದೂ ಜಾಗರಣ ವೇದಿಕೆ ಹಾಗೂ ಆಟೋ ಚಾಲಕರ ಸಂಘದ ಕಾರ್ಯಕರ್ತರು ಪತ್ತೆಹಚ್ಚಿ ಪೊನ್ನಂಪೇಟೆ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ವಿಚಾರಣೆ ವೇಳೆ ತಾವು ಬಾಂಗ್ಲಾದೇಶದ ನಿಯಾಸ್ಪುರ್ ಗ್ರಾಮದವರಾಗಿದ್ದು, ಬ್ರೋಕರ್ ಒಬ್ಬನ ನೆರವಿನಿಂದ ಗಡಿ ದಾಟಿ ಭಾರತ ಪ್ರವೇಶಿಸಿರುವುದಾಗಿ ಹೇಳಿಕೆ ನೀಡಿದ್ದಾರೆ. ಕೊಡಗು ಜಿಲ್ಲೆಯಾದ್ಯಂತ ಸಾವಿರಾರು ಅಕ್ರಮ ಬಾಂಗ್ಲಾ ವಲಸಿಗರು ತೋಟದ ಕಾರ್ಮಿಕರಾಗಿ ಹಾಗೂ ಇತರೆ ಕೆಲಸಗಳಲ್ಲಿ ನೆಲೆಸಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತಕ್ಷಣವೇ ಜಿಲ್ಲೆಯಾದ್ಯಂತ ಸಮಗ್ರ ತನಿಖೆ ನಡೆಸಿ ಎಲ್ಲರನ್ನೂ ಗಡಿಪಾರು ಮಾಡಬೇಕೆಂದು ಆಗ್ರಹಿಸಿದ್ದಾರೆ.






.
.
.
.
.
.
.
.
.
.
.
.
.
.
.
.
.
.
.
.
